ಪಾಟ್ನಾ,ಜು.12- ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್ ಭಟ್ ತಿಳಿಸಿದ್ದಾರೆ.
ಜೀವ ಬೆದರಿಕೆ ಹಿನ್ನೆಲೆ ರಾಜೇಶ್ ಭಟ್ ಪಾಟ್ನಾದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟೈಗರ್ ಮೆರಾಜ್ ಇಡಿಸಿ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಿಂದ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪಾಸ್ವಾನ್ ಅವರ ಜನಪ್ರಿಯತೆ ಹೆಚ್ಚುತ್ತಿರುವ ಕಾರಣ ಈ ಬೆದರಿಕೆ ಹಾಕಲಾಗಿದೆ. ಈ ಕೃತ್ಯ ಕ್ರಿಮಿನಲ್ ಉದ್ದೇಶ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ. ವಿಷಯದ ಗಂಭೀರತೆಯನ್ನು ತಕ್ಷಣವೇ ಅರಿತು ತ್ವರಿತ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ ಎಂದು ರಾಜೇಶ್ ಭಟ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸೈಬರ್ ಡಿಸಿಪಿ ನಿತೀಶ್‌ಚಂದ್ರ ಧರಿಯಾ, ಜುಲೈ 11ರ ರಾತ್ರಿ 9 ಗಂಟೆ ಸುಮಾರಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಪಾಟ್ನಾ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
- ಭ್ರಷ್ಟ ಅಧಿಕಾರಿಗಳಿಂದ ಭೂಗಳ್ಳರ ಪಾಲಾಗಿರುವ 200 ಕೋಟಿ ರೂ. ಮೌಲ್ಯದ ಭೂಮಿ ವಶಕ್ಕೆ ಆಗ್ರಹ
- A ಖಾತಾ ಸೋಗಿನಲ್ಲಿ 15,000 ಕೋಟಿ ರೂ. ಸುಲಿಗೆ : ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ
- ಆರ್ಎಸ್ಎಸ್ ಶತಮಾನೋತ್ಸವದಲ್ಲಿ ಪಾಲ್ಗೊಂಡಿದ್ದ ಆರ್ಡಿಪಿಆರ್ ನೌಕರರ ಅಮಾನತ್ತು!
- ಬೆಂಗಳೂರು : 14 ಲಕ್ಷ ಮೌಲ್ಯದ ನಕಲಿ ಸಿಗರೇಟ್ಗಳ ಜಪ್ತಿ
- ಬಿಜೆಪಿ ಭಿನ್ನರ ಮೀಟಿಂಗ್, ಗರಿಗೆದರಿದ ರಾಜಕೀಯ ಚಟುವಟಿಕೆ