Wednesday, July 9, 2025
Homeರಾಜಕೀಯ | Politicsನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Union Minister H.D. Kumaraswamy inaugurated MSTC corporate office in New Delhi.

ನವದೆಹಲಿ: ಲೋಹ ಹಾಗೂ ಉಕ್ಕು ಕ್ಷೇತ್ರದಲ್ಲಿ ನಾವೀನ್ಯತೆ ಹಾಗೂ ಮರು ಬಳಕೆಯನ್ನು ಉತ್ತೇಜಿಸಿ ಗ್ರೀನ್ ಸ್ಟೀಲ್ ತಯಾರಿಕೆಗೆ ಒತ್ತು ನೀಡಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯ ನವರೋಜಿ ನಗರದಲ್ಲಿ ಬುಧವಾರ ಎಂ ಎಸ್ ಟಿಸಿ (ಮೆಟಲ್ ಸ್ಕ್ರ್ಯಾಪ್ ಟ್ರೇಡ್ ಕಾರ್ಪೋರೆಷನ್ ಲಿಮಿಟೆಡ್) ನೂತನ ಕಾರ್ಪೊರೇಟ್ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಲೋಹ ವಲಯದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯ ಮಟ್ಟಕ್ಕೆ ತರಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಉದೇಶವಾಗಿದ್ದು, ಆ ನಿಟ್ಟಿನಲ್ಲಿ ನಾವು ವೇಗಗತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಮೆಟಲ್ ಸ್ಕ್ರ್ಯಾಪ್ ಅನ್ನು ಪರಿಣಾಮಕಾರಿಯಾಗಿ ವಿಲೇವಾರಿ ಹಾಗೂ ಮರುಬಳಕೆ ಮಾಡುವ ನಿಟ್ಟಿನಲ್ಲಿ ಮುತುವರ್ಜಿಯಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು.

1964ರಲ್ಲಿ ಲೋಹ ತ್ಯಾಜ್ಯ ವ್ಯಾಪಾರ ಸಂಸ್ಥೆಯಾಗಿ ಸ್ಥಾಪನೆಯಾದ MSTC ಕೇಂದ್ರ ಸರಕಾರಿ ಸ್ವಾಮ್ಯದ ಮಿನಿರತ್ನ ಕಂಪನಿಯಾಗಿದೆ. ದೇಶದ ಅತ್ಯಂತ ವಿಶ್ವಾಸಾರ್ಹ ಡಿಜಿಟಲ್ ಹರಾಜು ವೇದಿಕೆಗಳಲ್ಲಿ ಒಂದಾಗಿದ್ದು, ISO-ಪ್ರಮಾಣೀಕೃತ ಮೂಲಸೌಕರ್ಯ ಹೊಂದಿದೆ ಎಂದು ಸಚಿವರು ಕಂಪನಿಯ ಬಗ್ಗೆ ಮಾಹಿತಿ ನೀಡಿದರು.

ಕಂಪನಿಯು 4 ಲಕ್ಷಕ್ಕೂ ಹೆಚ್ಚು ಹರಾಜುಗಳನ್ನು ಪೂರ್ಣಗೊಳಿಸಿದ್ದು, MSTC ಸಾರ್ವಜನಿಕ ಆಸ್ತಿ ಹಣಗಳಿಕೆ, ಸ್ಪೆಕ್ಟ್ರಮ್ ಮಾರಾಟ ಮತ್ತು ಕಲ್ಲಿದ್ದಲು ಬ್ಲಾಕ್ ಹರಾಜಿನಲ್ಲಿ ಪ್ರಮುಖ ಕಂಪನಿಯಾಗಿ ಕೆಲಸ ಮಾಡುತ್ತಿದೆ. ಈ. ಕಂಪನಿ ಬೆಳವಣಿಗೆ ಹಾಗೂ ಪರಿವರ್ತನಾತ್ಮಕ ರೂಪಾಂತರವು ಪ್ರಧಾನಿ ನರೇಂದ್ರ ಮೋದಿ ಅವರ ವಿಶಾಲ ಅಭಿವೃದ್ಧಿಯ ದೃಷ್ಟಿಕೋನಕ್ಕೆ ಹೊಂದಿಕೆಯಾಗುತ್ತದೆ.

ಅವರ ನಾಯಕತ್ವವು ಸಾರ್ವಜನಿಕ ಸೇವಾ ವಿತರಣೆಯಲ್ಲಿ ತಂತ್ರಜ್ಞಾನ, ಪಾರದರ್ಶಕತೆ ಮತ್ತು ದಕ್ಷತೆಗೆ ಒತ್ತು ನೀಡಿದೆ. ಡಿಜಿಟಲ್ ಸಕ್ರಿಯಗೊಳಿಸುವವನಾಗಿ MSTC ಯ ಪಾತ್ರವು ವಲಯಗಳಲ್ಲಿ ಹೊಣೆಗಾರಿಕೆ ಮತ್ತು ಒಳಗೊಳ್ಳುವಿಕೆಯನ್ನು ನೀಡುವ ಈ ಆಡಳಿತ ಮಾದರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು. ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, MSTC ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮಾನವೇಂದ್ರ ಗೋಶಾಲ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ತಿತರಿದ್ದರು.

RELATED ARTICLES

Latest News