Friday, October 4, 2024
Homeರಾಜ್ಯಮುಕ್ತ ಪ್ರವೇಶಕ್ಕೆ ಸಿಬಿಐಗೆ ನಿರ್ಭಂಧ : ಕೇಂದ್ರ ಸಚಿವ ಎಚ್‌ಡಿಕೆ ಗರಂ

ಮುಕ್ತ ಪ್ರವೇಶಕ್ಕೆ ಸಿಬಿಐಗೆ ನಿರ್ಭಂಧ : ಕೇಂದ್ರ ಸಚಿವ ಎಚ್‌ಡಿಕೆ ಗರಂ

Union Minister HDK on Congress Govt

ಬೆಂಗಳೂರು,ಸೆ.27- ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್‌ ಮಾಡಿಸಿದ್ದೀರಿ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಿದ್ದಾರೆ.

ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಬಿಐ ರಾಜ್ಯ ಪ್ರವೇಶಕ್ಕೆ ಬಂದ್‌ ಮಾಡಿಸಿರುವುದರಿಂದ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾಧ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಲೇವಡಿ ಮಾಡಿದ್ದಾರೆ.ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯನವರೇ, ನಿಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು, ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು, ಮೂಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ.

ಕರ್ಮ ಹಿಟ್‌ ಬ್ಯಾಕ್‌ ಎಂದರೆ ಇದೇ ಅಲ್ಲವೇ ಸಿದ್ದರಾಮಯ್ಯನವರೇ?, ನಿಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್‌ ಬರ್ಖಾಸ್ತು ಮಾಡಿಬಿಟ್ಟಿತು ಎಂದು ಅವರು ಟೀಕಾ ಪ್ರಹಾರ ಮಾಡಿದ್ದಾರೆ.

RELATED ARTICLES

Latest News