ನವದೆಹಲಿ, ಜ.12- ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸದ್ಯ ಅವರು ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆ. ನನಗೆ ಸೋಂಕಿನ ಸೌಮ್ಯ ಲಕ್ಷಣಗಳಿವೆ ಹಾಗೂ ಕೋವಿಡ್-19 ದೃಢಪಟ್ಟಿದೆ. ಎಲ್ಲ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದೇನೆ ಮತ್ತು ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪ್ರತ್ಯೇಕವಾಗಿ ವಾಸಿಸುವುದರ ಜತೆಗೆ ಪರೀಕ್ಷೆಗೆ ಒಳಗಾಗುವಂತೆ ಟ್ವಿಟ್‍ನಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ಹಲವು ಗಣ್ಯರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್‍ಸಿಂಗ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಹಾರ ಮುಖ್ಯಮಂತ್ರಿ ನಿತೀಶ್‍ಕುಮಾರ್, ಹಲವು ಸಚಿವರು, ಶಾಸಕರಲ್ಲೂ ಇತ್ತೀಚೆಗೆ ಸೋಂಕು ದೃಢಪಟ್ಟಿದೆ.
