ಪಿಎಫ್ ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ.. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿಂದೆ ಪಿಎಫ್.ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಬೊಮ್ಮಾಯಿ ಶಂಕೆ ವ್ಯಕ್ತಪಡಿಸಿದ್ದಾರೆ..
ಪಿಎಫ್ ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ.. ಇಂಥಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಸಿಎಂ ಬಸವರಾಜ್ ಬೊಮ್ಮಾಯಿ ಅವರದ್ದಾಗಿದೆ.. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು..
ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪಿಎಫ್,ಐ, ಎಸ್.ಡಿ.ಪಿ.ಐ ಸಂಘಟನೆಯವರು ಇಂಥಹ ಕೃತ್ಯದ ಹಿಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದರು.. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ.. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದರು..
ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗ್ತಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.. ಪಿಎಫ್.ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚೆ ನಡೆಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ..