ಧರ್ಮಾಧಿಕಾರಿ ಹೆಗ್ಗಡೆಯವರ ಜೀವನ ಧರ್ಮದ ಪ್ರತಿರೂಪ : ಸ್ಮೃತಿ ಇರಾನಿ

Social Share

ಬೆಳ್ತಂಗಡಿ, ನ.23- ಅನ್ನದಾನ, ವಿದ್ಯಾದಾನ, ಔಷಧ ದಾನ ಮತ್ತು ಅಭಯ ದಾನ ಎಂಬ ಚತುರ್ವಿಧ ದಾನಗಳು ನಿತ್ಯೋತ್ಸವವಾಗಿದ್ದು ಧರ್ಮಸ್ಥಳದಲ್ಲಿ. ಸತ್ಯ, ಧರ್ಮ, ನ್ಯಾಯ ಮತ್ತು ನೀತಿ ನೆಲೆ ನಿಂತಿದೆ. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಧರ್ಮದ ಸಾಕಾರ ಮೂರ್ತಿಯಾಗಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಹೇಳಿದರು.

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂದರ್ಭದಲ್ಲಿ ಸರ್ವಧರ್ಮ ಸಮ್ಮೇಳನದ 90ನೆ ಅಧಿವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಗ್ಗಡೆಯವರ ಶಿಸ್ತು, ಸಮಯಪ್ರಜ್ಞಾ, ವಿನಯ, ಸೌಜನ್ಯ ಸರಳ ಹಾಗೂ ಉದಾತ್ತ ಚಿಂತನೆಗಳು ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದರು.

ಜನತಾ ಸೇವೆಯೇ ಜನಾರ್ದನ ಸೇವೆ ಎಂದು ನಿರಂತರ ಲೋಕಕಲ್ಯಾಣದ ಸೇವಾ ಕಾರ್ಯಗಳಲ್ಲಿ ನಿರತರಾದ ಹೆಗ್ಗಡೆಯವರ ಜೀವನವೇ ಧರ್ಮದ ಪ್ರತಿರೂಪವಾಗಿದೆ. ಜನಹಿತವೇ ರಾಷ್ಟ್ರದ ಹಿತ ಎಂಬ ನಿಸ್ವಾರ್ಥ ಭಾವನೆಯಿಂದ ಅವರು ಸೇವೆ ಮಾಡುತ್ತಿದ್ದಾರೆ.

ಶೇಷನ್ ಅವರಂತಹ ಚುನಾವಣಾ ಆಯುಕ್ತರ ಅವಶ್ಯಕತೆಯಿದೆ : ಸುಪ್ರೀಂ

ದೇವರನ್ನು ನಾವು ಯಾರೂ ನೋಡದಿದ್ದರೂ ಸಹ ದೇವರ ಭಯ ಮತ್ತು ಭಕ್ತಿಯಿಂದ ನಾವು ಧರ್ಮದ ಮರ್ಮವನ್ನರಿತು ಸನ್ಮಾರ್ಗದಲ್ಲಿ ಸಾಗಲು ಪ್ರೇರಣೆ ಸಿಗುತ್ತದೆ. ಸರ್ವಧರ್ಮಗಳ ಸಾರವೂ ಒಂದೇ ಆಗಿದ್ದು, ನಾವು ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸಬೇಕು, ಪ್ರೀತಿಸಬೇಕು ಎಂದು ಸಲಹೆ ನೀಡಿದರು.

ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸ್ವ-ಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ನೀಡಿದ ಕೊಡುಗೆಯನ್ನು ಶ್ಲಾಘಿಸಿ ಅಭಿನಂದಿಸಿದರು.
ಧರ್ಮಸ್ಥಳದ ಸೇವಾಕಾಯಕ ವಿಶ್ವಕ್ಕೆ ಮಾದರಿ ಹಾಗೂ ಅನುಕರಣೀಯವಾಗಿದ್ದು, ಇದರಿಂದ ಇಂದಿನ ಯುವಜನತೆ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸುವಂತಾಗಲಿ ಎಂದು ಸಚಿವರು ಹಾರೈಸಿದರು.

ಡಾ.ವೀರೇಂದ್ರ ಹೆಗ್ಗಡೆ ಮಾತನಾಡಿ, ಧರ್ಮವು ಶಾಶ್ವತವಾಗಿದ್ದು, ಸುಖ-ದುಃಖಗಳು ತಾತ್ಕಾಲಿಕವಾಗಿವೆ. ಮಾನವೀಯತೆ ಮತ್ತು ಸಮನ್ವಯತೆ ಧರ್ಮದ ಮೂಲ ಉದ್ದೇಶವಾಗಿದ್ದು, ನಮ್ಮ ಸಾರ್ಥಕ ಬದುಕಿಗೆ ಪ್ರೇರಣೆ ನೀಡುವ ಸಾಧನವಾಗಿದೆ. ಜ್ಞಾನ ಸಂಗ್ರಹವೇ ನಮ್ಮ ಬದುಕಿನ ಗುರಿಯಾಗಬೇಕು. ಧರ್ಮ ಮತ್ತು ನೈತಿಕತೆ ಮೂಲಕ ಚಾರಿತ್ರ್ಯ ನಿರ್ಮಾಣವಾಗಬೇಕು ಎಂದು ಸಲಹೆ ನೀಡಿದರು.

ಮಿಜೋರಾಂನಲ್ಲಿ ಭಾರಿ ಪ್ರಮಾಣದ ಸ್ಪೋಟಕ ವಶಕ್ಕೆ ಪಡೆದ ಎನ್‍ಐಎ

ರಾಷ್ಟ್ರ ನಿರ್ಮಾಣದಲ್ಲಿ ಮಾನವೀಯ ಮೌಲ್ಯಗಳ ಪಾತ್ರ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಧರ್ಮ ಮತ್ತು ನೈತಿಕತೆಯ ನೆಲೆಯಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಧರ್ಮದ ಮರ್ಮವನ್ನರಿತು ಬಾಳಿದಾಗ ಸಂಕಷ್ಟಗಳಿಂದ ಮುಕ್ತಿ ದೊರಕಿ ಜೀವನ ಪಾವನವಾಗುತ್ತದೆ. ವಿವಿಧ ಧರ್ಮಗಳ ಸಾರ ಮತ್ತು ಸಂದೇಶವನ್ನು ಅರಿತು ಸರ್ವಧರ್ಮ ಸಮನ್ವಯದೊಂದಿಗೆ ಸಾಮರಸ್ಯವನ್ನು ಸಾಧಿಸುವುದೇ ಸರ್ವಧರ್ಮ ಸಮ್ಮೇಳನದ ಉದ್ದೇಶವಾಗಿದೆ.

ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದೆ. ಶ್ರೀ ಮಂಜುನಾಥ ಸ್ವಾಮಿಯ ಸೇವೆ ಮಾಡುವುದು ತನ್ನ ಪ್ರಮುಖ ಕರ್ತವ್ಯವಾದರೂ ಸಾನ್ನಿಧ್ಯ ಸೇವೆ ಮತ್ತು ಸಾನ್ನಿಧ್ಯ ರಕ್ಷಣೆಯೊಂದಿಗೆ ಲೋಕಕಲ್ಯಾಣಕ್ಕಾಗಿ ಅನೇಕ ಸೇವಾಕಾರ್ಯಗಳನ್ನು ಅನುಷ್ಠಾನಗೊಳಿಸಿರುವುದಾಗಿ ಹೆಗ್ಗಡೆ ಹೇಳಿದರು.

ಜೆಡಿಎಸ್ ನಲ್ಲಿ ಮುಸ್ಲಿಮರು ಸಿಎಂ ಆಗಬಹುದು : ಹೆಚ್‌ಡಿಕೆ

ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜ ಳ, ವಕೀಲ ಎಂ.ಆರ್. ಸತ್ಯನಾರಾಯಣ, ಗ್ರಾಪಂ ಪಿಡಿಒ ಉಮೇಶ್‍ಗೌಡ, ಉಪನ್ಯಾಸಕ ಡಾ.ಶ್ರೀಧರ ಭಟ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Articles You Might Like

Share This Article