Wednesday, February 28, 2024
Homeರಾಜ್ಯಅಸಂಘಟಿತ ಕಾರ್ಮಿಕ ವಲಯಗಳಿಗೆ ಇಎಸ್‍ಐ, ಪಿಎಫ್ ಸೌಲಭ್ಯ

ಅಸಂಘಟಿತ ಕಾರ್ಮಿಕ ವಲಯಗಳಿಗೆ ಇಎಸ್‍ಐ, ಪಿಎಫ್ ಸೌಲಭ್ಯ

ಬೆಳಗಾವಿ,ಡಿ.5- 43 ಅಸಂಘಟಿತ ಕಾರ್ಮಿಕ ವಲಯಗಳಿಗೆ ಇಎಸ್‍ಐ, ಪಿಎಫ್ ಸೇರಿದಂತೆ ಇತರೆ ಸೌಲಭ್ಯ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಕಾಪು ಕ್ಷೇತ್ರದ ಗುರ್ಮೆ ಸುರೇಶ್‍ಶೆಟ್ಟಿ ಅವರು ಮಾತನಾಡಿ, ರಾಜ್ಯಾದ್ಯಂತ 10 ಲಕ್ಷ ಟೈಲರ್ ವೃತ್ತಿ ಮಾಡುವವರಿ ದ್ದಾರೆ. ಅವರಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ 43 ಅಸಂಘಟಿತ ವಲಯಗಳಲ್ಲಿ ವಿವಿಧ ಕ್ಷೇತ್ರದ ಕಾರ್ಮಿಕರಿದ್ದಾರೆ. ಅವರಿಗೆ ಇಎಸ್‍ಐ, ಪಿಎಫ್‍ನಂತಹ ಸೌಲಭ್ಯಗಳನ್ನು ಒದಗಿಸಲು ಅವಕಾಶವಿಲ್ಲ ಎಂದರು.ತೇರದಾಳ ಕ್ಷೇತ್ರದ ಸಿದ್ಧುಸವದಿಯವರು ಕೂಡ ಕಾರ್ಮಿಕ ಕಲ್ಯಾಣದ ಬಗ್ಗೆ ಪ್ರಶ್ನೆ ಕೇಳಿದರು. ಇದು ವ್ಯಾಪಕ ಚರ್ಚೆಗೆ ಕಾರಣವಾಯಿತು.

ಸಚಿವ ಸಂತೋಷ್ ಲಾಡ್ ಮಾತನಾಡಿ, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಸೆಸ್ ಸಂಗ್ರಹ ಮಾಡಲಾಗುತ್ತಿದೆ. ಅದರಡಿ ಕಲ್ಯಾಣ ಯೋಜನೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಉಳಿದಂತೆ ರಾಜ್ಯಸರ್ಕಾರ ಗಿಗ್ ಕ್ಷೇತ್ರದ ನೌಕರರಿಗೆ ವಿಮಾ ಯೋಜನೆ ಮತ್ತು ಇಎಸ್‍ಐ, ಪಿಎಫ್ ಸೌಲಭ್ಯ ಒದಗಿಸುತ್ತಿದೆ. ಸಾರಿಗೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ 35 ರಿಂದ 40 ಲಕ್ಷ ನೌಕರರಿಗೂ ಸೌಲಭ್ಯ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರ ಕ್ಷೇತ್ರಗಳ ಕಾರ್ಮಿಕರಿಗೂ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭಾಧ್ಯಕ್ಷ ಯು.ಟಿ.ಖಾದರ್‍ರವರು, ಗಾರ್ಮೆಂಟ್ಸ್, ವಾಹನ ಉತ್ಪಾದನೆ, ಖರೀದಿಯಂತಹ ಕ್ಷೇತ್ರಗಳಿಗೆ ಸೆಸ್ ಹಾಕಿ ಅದರಿಂದ ಬರುವ ಹಣವನ್ನು ಆಯಾ ಕ್ಷೇತ್ರದ ಕಾರ್ಮಿಕರ ಕಲ್ಯಾಣಕ್ಕೆ ಬಳಕೆ ಮಾಡುವಂತೆ ಸಲಹೆ ನೀಡಿದರು. ಇದನ್ನು ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದರು.

RELATED ARTICLES

Latest News