ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವುಗೊಳಿಸಲು ಸೂಚನೆ

Social Share

ಬೆಂಗಳೂರ,ಫೆ.21-ರಾಜ್ಯದ ಯಾವ ಯಾವ ಭಾಗಗಳಲ್ಲಿ ಅವೈಜ್ಞಾನಿವಕಾಗಿ ರಸ್ತೆ ಉಬ್ಬುಗಳನ್ನು ಹಾಕಿದ್ದರೋ ಅದನ್ನು ತಕ್ಷಣವೇ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ಅವಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರಿಗೆ ಉತ್ತರಿಸಿದ ಅವರು, ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆಗೆದು ಹಾಕಬೇಕೆಂದು ಅನೇಕ ಕಡೆ ಮನವಿ ಬಂದಿದೆ. ಹೀಗಾಗಿ ಈಗಾಗಲೇ ಅಕಾರಿಗಳ ಜೊತೆ ಚರ್ಚಿಸಿ ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಒಂದು ವೇಳೆ ರಸ್ತೆ ಉಬ್ಬುಗಳನ್ನು ತೆರವುಗೊಳಿಸುವಾಗ ಯಾರಾದರೂ ಅಡ್ಡಿಪಡಿಸಿದರೆ ಪೊಲೀಸರ ಸಹಕಾರ ಪಡೆಯಲು ಸಹ ಸೂಚನೆ ನೀಡಲಾಗಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಸರ್ಕಾರ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಆಶ್ವಾಸನೆ ನೀಡಿದರು.
ಶಾಸಕ ಕುಮಾರ್ ಬಂಗಾರಪ್ಪ ಅವರು ರಸ್ತೆಗಳನ್ನು ಇಂಡಿಯನ್ ಸ್ಟ್ಯಾಂಡರ್ಡ್ ಕಾಂಗ್ರೆಸ್ ರೀತಿಯಲ್ಲಿ ನಿರ್ಮಾಣ ಮಾಡಬೇಕೆಂದು ಸಲಹೆ ಮಾಡಿದ್ದಾರೆ. ನಾನು ಅವರ ಸಲಹೆಯನ್ನು ಸಂಪೂರ್ಣವಾಗಿ ಒಪ್ಪುತ್ತೇನೆ. ಶಾಸಕರನ್ನು ಸಭೆಗೆ ಆಹ್ವಾನಿಸಿ ಮಾಹಿತಿ ಪಡೆಯುತ್ತೇನೆ ಅಧಿಕಾರಿಗಳಿಗೆ ಅನುಷ್ಠಾನ ಮಾಡಲು ಸೂಚನೆ ನೀಡಲಾಗುವುದು ಎಂದು ಪಾಟೀಲ್ ಹೇಳಿದರು.
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಹಾಗೂ ತಾಳಗೊಪ್ಪ ಹೋಬಳಿ ಸೇರಿದಂತೆ 53.60 ಕಿ.ಮೀ ಉದ್ದಕ್ಕೆ ಒಂದು ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಜೊತೆಗೆ 99.90 ಕಿ.ಮೀ ಉದ್ದದ ರಸ್ತೆಯನ್ನು ಮೇಲ್ದರ್ಜೆಗೇರಿಸಲಾಗಿದೆ ಎಂದರು.

Articles You Might Like

Share This Article