ಆದಿಯೋಗಿ ಪ್ರತಿಮೆ ಉದ್ಘಾಟನೆಗೆ ಹೈಕೋರ್ಟ್ ಹಸಿರು ನಿಶಾನೆ

Social Share

ಬೆಂಗಳೂರು,ಜ.13- ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಶಾ ಯೋಗ ಕೇಂದ್ರದ ಆದಿಯೋಗಿ ಪ್ರತಿಮೆಯನ್ನು ಜನವರಿ 15 ರಂದು ಉದ್ಘಾಟಿಸಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಆದರೆ, ಸ್ಥಳದಲ್ಲಿ ನಿರ್ಮಾಣ ಚಟುವಟಿಕೆಗಳ ಬಗ್ಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಅರಣ್ಯ ಮತ್ತು ಭೂ ಸ್ವಾೀಧಿನಕ್ಕೆ ಸಂಬಂಧಿಸಿದ ವಿವಿಧ ನಿಯಮಗಳು ಮತ್ತು ಕಾನೂನುಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಲಾಗಿದ್ದ ಅರ್ಜಿ ಆಧರಿಸಿ ಜನವರಿ 11ರಂದು ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

ಶುಕ್ರವಾರ, ಈಶಾ ಯೋಗ ಕೇಂದ್ರದ ಪರ ವಕೀಲರು, ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಮತ್ತು ಅಶೋಕ್ ಎಸ್.ಕಿಂಗೈ ಅವರ ವಿಭಾಗೀಯ ಪೀಠದ ಮುಂದೆ ಹಾಜರಾಗಿ, ಜನವರಿ 15ರಂದು ಕೇಂದ್ರದ ಉದ್ಘಾಟನೆಗೆ ಕಾರ್ಯಕ್ರಮ ನಿಗದಿಯಾಗಿದೆ. ಉಪರಾಷ್ಟ್ರಪತಿ ಜಗದೀಪ್ ಧನಖರ್ ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿ, ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

ಮೆಟ್ರೋ ಪಿಲ್ಲರ್ ದುರಂತ : ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

ಈಶಾ ಯೋಗ ಕೇಂದ್ರವು ಚಿಕ್ಕಬಳ್ಳಾಪುರ ಜಿಲ್ಲೆಯ ಅವಲಗುರ್ಕಿಯಲ್ಲಿ 112 ಅಡಿ ಎತ್ತರದ ಆದಿಯೋಗಿಯ ಪ್ರತಿಮೆಯನ್ನು ನಿರ್ಮಿಸುತ್ತಿದೆ. ಕಾರ್ಯಕ್ರಮಕ್ಕಾಗಿ ಯಾವುದೇ ಮರಗಳನ್ನು ಕಡಿಯುವುದಿಲ್ಲ ಮತ್ತು ನಿರ್ಮಾಣ ಚಟುವಟಿಕೆಗಳಿಗೆ ಮುಂದಾಗುತ್ತಿಲ್ಲ ಎಂದು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಲಾಯಿತು.

ವಾದ ಆಲಿಸಿದ ನ್ಯಾಯಾಲಯ ಈಗಾಗಲೇ ಕಾರ್ಯಕ್ರಮ ನಿಗದಿಯಾಗಿರುವುದರಿಂದ ಮುಂದುವರಿಯಬಹುದು ಎಂದು ಹೇಳಿದೆ. ಪ್ರತಿಮೆ ಉದ್ಘಾಟನೆ ವೇಳೆ ಪಟಾಕಿ ಸಿಡಿಸದಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದರು.

ಕರ್ನಾಟಕದಲ್ಲಿ ಪ್ರಧಾನಿ ಮೋದಿ ಸರಣಿ ರ‍್ಯಾಲಿಗೆ ಬಿಜೆಪಿ ಸಿದ್ಧತೆ

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಉಪಾಧ್ಯಕ್ಷರು ಭಾಗವಹಿಸುವ ಕಾರ್ಯಕ್ರಮವಾಗಿರುವುದರಿಂದ ಇಂತಹ ಕಾರ್ಯಕ್ರಮಗಳನ್ನು ನಡೆಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಫೆಬ್ರವರಿ 2ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿ ಮಾಡಲಾಗಿದೆ.

Unveil, Adiyogi Statue, Karnataka, High Court, Permits, Isha Yoga, Centre,

Articles You Might Like

Share This Article