ಯುಪಿ ಮೂಲದ ದಂತ ವೈದ್ಯೆ ಬೆಂಗಳೂರಲ್ಲಿ ಆತ್ಮಹತ್ಯೆ

Social Share

ಬೆಂಗಳೂರು, ಫೆ. 2- ಉತ್ತರ ಪ್ರದೇಶ ಮೂಲದ ದಂತ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮೂಲತಃ ಉತ್ತರ ಪ್ರದೇಶದ ಲಕ್ನೋ ನಿವಾಸಿ ಪ್ರಿಯಾಂಶಿ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡಿರುವ ದಂತವೈದ್ಯೆ.

ಸಂಜಯ ನಗರ ವ್ಯಾಪ್ತಿಯ ಆರ್ಎಂವಿ ಬಡಾವಣೆಯಲ್ಲಿ ವಾಸವಾಗಿದ್ದ ಪ್ರಿಯಾಂಶಿ ಅವರು ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಆ ಸಂದರ್ಭದಲ್ಲಿ ವೈದ್ಯ ಸುಮಿತ್ ಎಂಬುವರ ಪರಿಚಯವಾಗಿ ಸ್ನೇಹಕ್ಕೆ ತಿರುಗಿ ನಂತರ ಇವರಿಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಈ ನಡುವೆ ಜನವರಿ 23ರಂದು ಪ್ರಿಯಾಂಶಿ ತಾನು ವಾಸವಾಗಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸುದ್ದಿ ತಿಳಿದು ಸಂಜಯನಗರ ಠಾಣೆ ಪೊಲೀಸರು ಸ್ಥಳಕ್ಕಾ ಗಮಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಬಗ್ಗೆ ನೆರೆಹೊರೆಯವರಿಂದಲೂ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.
ಮೃತಳ ಪೋಷಕರಿಗೆ ವಿಷಯ ತಿಳಿಸಿದ್ದು, ಪೋಷಕರು ನೀಡುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

UP-based dentist commits suicide in Bangalore

Articles You Might Like

Share This Article