ನೆಲಮಂಗಲದಲ್ಲಿ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ‘ಕ್ಷೇಮವನ’ ಉದ್ಘಾಟಿಸಿದ ಯೋಗಿ

Social Share

ಬೆಂಗಳೂರು : ಬೆಂಗಳೂರಿನ ಮಹದೇವಪುರ ನೆಲಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ಕ್ಷೇಮವನ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಪೂಜ್ಯ ಶ್ರೀ ಯೋಗಿ ಆದಿತ್ಯನಾಥ್ ಜೀ, ಮಾನ್ಯ ಮುಖ್ಯಮಂತ್ರಿಗಳು, ಉತ್ತರ ಪ್ರದೇಶ, ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಧರ್ಮಾಧಿಕಾರಿಗಳು, ಶ್ರೀಕ್ಷೇತ್ರ ಧರ್ಮಸ್ಥಳ, ಇವರುಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು, ಸಚಿವರುಗಳಾದ ಡಾ. ಕೆ ಸುಧಾಕರ್ ಅವರು, ಶ್ರೀ ನಾರಾಯಣಗೌಡ ಅವರು, ಶ್ರೀ ಭೈರತಿ ಬಸವರಾಜ್ ಅವರು, ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಬಿ ಎನ್ ಬಚ್ಚೇಗೌಡ ಅವರು, ಶಾಸಕರಾದ ಶ್ರೀ ಶ್ರೀನಿವಾಸ ಮೂರ್ತಿಯವರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Articles You Might Like

Share This Article