ಯುಪಿಯಲ್ಲಿ ನಾಳೆ 3ನೇ ಹಂತದ ಮತದಾನ, ಅಖಿಲೇಶ್ ಭವಿಷ್ಯ ನಿರ್ಧಾರ

Social Share

ಲಕ್ನೋ, ಫೆ.19 ಉತ್ತರ ಪ್ರದೇಶದ 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮೂರನೇ ಹಂತದ ಮತದಾನ ನಡೆಯಲಿದೆ.
ರಾಜ್ಯ ಚುನಾವಣೆಯ ಮೂರನೇ ಹಂತದ ಬಹಿರಂಗ ಪ್ರಚಾರ ಶುಕ್ರವಾರ ಅಂತ್ಯಗೊಂಡಿದ್ದು, ಮತದಾರರನ್ನು ಸೆಳೆಯಲು ಪಕ್ಷಗಳ ಹಿರಿಯ ನಾಯಕರು ಅಂತಿಮ ಪ್ರಯತ್ನ ನಡೆಸುತ್ತಿದ್ದಾರೆ.
ಈ ಹಂತದಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದು, ಭಾನುವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6ರವರೆಗೆ ನಡೆಯಲಿದೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪರ್ಧಿಸುತ್ತಿರುವ ಕರ್ಹಾಲ್ ವಿಧಾನಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಮತದಾನ ನಡೆಯಲಿದ್ದು, ಈ ಕ್ಷೇತ್ರದಿಂದ ಬಿಜೆಪಿ ಕೇಂದ್ರ ಸಚಿವ ಎಸ್ಪಿ ಸಿಂಗ್ ಬಾಘೇಲ್ ಅವರನ್ನು ಕಣಕ್ಕಿಳಿಸಿದೆ. ಮತ್ತು ಸಮಾಜವಾದಿ ಹಿರಿಯ ನಾಯಕ ಶಿವಪಾಲ್ ಸಿಂಗ್ ಯಾದವ್ ಅವರ ಭವಿಷ್ಯವನ್ನು ನಿಧರಿಸಲಿದ್ದು, ಅವರು ತಮ್ಮ ಸಾಂಪ್ರದಾಯಿಕ ಜಸ್ವಂತ್ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರೆ.
ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್ಪುರಿ, ಫರುಕಾಬಾದ್, ಕನೌಜ್, ಇಟಾವಾ, ಔರೈಯಾ, ಕಾನ್ಪುರ್ ದೇಹತ್, ಕಾನ್ಪುರ್ ನಗರ್, ಜಲೌನ್, ಝಾನ್ಸಿ, ಲಲಿತ್ಪುರ್, ಹಮೀರ್ಪುರ್ ಮತ್ತು ಮಹೋಬಾ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಶುಕ್ರವಾರ ಮೂರನೇ ಹಂತದ ಪ್ರಚಾರ ಕೊನೆಗೊಳ್ಳುವ ಮೊದಲು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾನ್ಪುರ, ಕಲ್ಪಿ, ಜಲೌನ್ ಮತ್ತು ಹಮೀರ್ಪುರದಲ್ಲಿ ಮನೆ ಮನೆಗೆ ಮೆರವಣಿಗೆಯನ್ನು ಕೈಗೊಂಡರು, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಜಲೌನ್ ಮತ್ತು ಔರೈಯಾದಲ್ಲಿ ಚುನಾವಣಾ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು.
ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್ ಕರ್ಹಾಲ್ನಲ್ಲಿ ತಮ್ಮ ಪುತ್ರ ಅಖಿಲೇಶ್ ಯಾದವ್ಗೆ ಮತ ಯಾಚಿಸಿದರು. ಕರ್ಹಾಲ್ನ ಎಲ್ಲಾ ಬೂತ್ಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸುವಂತೆ ಕೋರಿ ಬಿಜೆಪಿ ಚುನಾವಣಾ ಆಯೋಗವನ್ನು ಸಂಪರ್ಕಿಸಿತ್ತು.

Articles You Might Like

Share This Article