Sunday, September 8, 2024
Homeರಾಷ್ಟ್ರೀಯ | Nationalನ್ಯಾಯಧೀಶೆಗೆ ಲೈಂಗಿಕ ಕಿರುಕುಳ ಆರೋಪ, ವರದಿ ಕೇಳಿದ ಸುಪ್ರೀಂ ಸಿಜೆ ಚಂದ್ರಚೂಡ್

ನ್ಯಾಯಧೀಶೆಗೆ ಲೈಂಗಿಕ ಕಿರುಕುಳ ಆರೋಪ, ವರದಿ ಕೇಳಿದ ಸುಪ್ರೀಂ ಸಿಜೆ ಚಂದ್ರಚೂಡ್

ನವದೆಹಲಿ,ಡಿ.15- ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶರೊಬ್ಬರು ನನ್ನ ಮೇಳೆ ಲೈಂಗಿಕ ಕಿರುಕುಳ ನಡೆಸಲಾಗಿದೆ ಹೀಗಾಗಿ ಆತ್ಮಹತ್ಯೆಗೆ ಅನುಮತಿ ಕೋರಿದ್ದಾರೆ ಎಂಬ ಬಹಿರಂಗ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ವರದಿ ಕೇಳಿದ್ದಾರೆ.

ಬಾರಾಬಂಕಿ ಜಿಲ್ಲಾ ನ್ಯಾಯಾಧೀಶರು ಮತ್ತು ಅವರ ಸಹಚರರಿಂದ ಲೈಂಗಿಕ ಕಿರುಕುಳ ಅನುಭವಿಸಿದ್ದೇನೆ. ನನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ದಯವಿಟ್ಟು ನನಗೆ ಅನುಮತಿಸಿ. ನನ್ನ ಜೀವನವನ್ನು ವಜಾಗೊಳಿಸಲಿ ಎಂದು ಬಂಡಾದ ಮಹಿಳಾ ನ್ಯಾಯಾಧೀಶರು ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದರು. ನನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ನನ್ನನ್ನು ಸಂಪೂರ್ಣ ಕಸದಂತೆ ನೋಡಿಕೊಳ್ಳಲಾಗಿದೆ. ನಾನು ಬೇಡದ ಕೀಟದಂತೆ ಭಾವಿಸುತ್ತೇನೆ ಎಂದು ಅವರು ಪತ್ರದಲ್ಲಿ ಅಲವತ್ತುಕೊಂಡಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಸೂಚನೆಯ ಮೇರೆಗೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದು ಮಹಿಳಾ ನ್ಯಾಯಾೀಶರ ಎಲ್ಲಾ ದೂರುಗಳ ಸ್ಥಿತಿಯ ಕುರಿತು ಇಂದು ಬೆಳಿಗ್ಗೆ ವರದಿಯನ್ನು ಕೇಳಿದ್ದಾರೆ.

ಸುವರ್ಣಸೌಧದಲ್ಲಿ ಜಾರಿ ಬಿದ್ದ ಶಾಸಕ, ಸದನದಲ್ಲಿ ಸ್ವಾರಸ್ಯಕರ ಚರ್ಚೆ

ಹೈಕೋರ್ಟ್‍ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯವರೂ ಬಹಿರಂಗ ಪತ್ರದ ಬಗ್ಗೆ ಗಮನಹರಿಸಿದ್ದಾರೆ ಎಂದು ನಿನ್ನೆ ರಾತ್ರಿ ಮಹಾಲೇಖಪಾಲರಿಗೆ ದೂರವಾಣಿ ಮೂಲಕ ತಿಳಿಸಲಾಗಿದೆ. ಜುಲೈ 2023 ರಲ್ಲಿ ಹೈಕೋರ್ಟ್‍ನ ಆಂತರಿಕ ದೂರುಗಳ ಸಮಿತಿಗೆ ದೂರು ಸಲ್ಲಿಸಿದ ನಂತರ ತನ್ನ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ನ್ಯಾಯಾಧೀಶರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ, ಆದರೆ ವಿಚಾರಣೆ ಪ್ರಹಸನ ಮತ್ತು ನೆಪ ಎಂದು ಅವರು ಆರೋಪಿಸಿದ್ದಾರೆ.

ನನಗೆ ಇನ್ನು ಬದುಕುವ ಇಚ್ಛೆ ಇಲ್ಲ. ಕಳೆದ ಒಂದೂವರೆ ವರ್ಷದಲ್ಲಿ ನನ್ನನ್ನು ನಡೆದಾಡುವ ಶವದಂತೆ ನೋಡಿಕೊಂಡಿದ್ದಾರೆ. ಇನ್ನು ಮುಂದೆ ಈ ನಿರ್ಜೀವ ದೇಹವನ್ನು ಹೊತ್ತುಕೊಂಡು ಹೋಗುವುದರಲ್ಲಿ ಯಾವುದೇ ಉದ್ದೇಶವಿಲ್ಲ. ನನ್ನ ಜೀವನದಲ್ಲಿ ಯಾವುದೇ ಉದ್ದೇಶವಿಲ್ಲ, ಎರಡು ಪುಟಗಳ ಪತ್ರ ಭಾರಿ ವೈರಲ್ ಆಗಿತ್ತು.

RELATED ARTICLES

Latest News