ಲಕ್ನೊ, ನ.3- ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ವ್ಯಕ್ತಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ಈ ಮೂವರು ನಾಯಕರ ಚಿತ್ರಗಳು ಮತ್ತು ಅಶ್ಲೀಲ ಹಾಡನ್ನು ಹೊಂದಿರುವ ಪೋಸ್ಟ್ ನವೆಂಬರ್ 1 ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಪ್ರದೇಶದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.
ಚಕ್ಜೀತ್ ರಾಯ್ ಗ್ರಾಮದ ಗ್ರಾಮ ಕಾವಲುಗಾರ (ಚೌಕಿದಾರ್) ಜೈಪಾಲ್ ಗೌತಮ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಸೂರ್ಯವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಇನ್‌್ಸಪೆಕ್ಟರ್ ಅಜಿತ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.ಆರೋಪಿಯನ್ನು ಅದೇ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪುರ ಗ್ರಾಮದ ನಿವಾಸಿ ಆಕಾಶ್ ಯಾದವ್ ಎಂದು ಗುರುತಿಸಲಾಗಿದೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 196(1)(ಎ) (ಧರ್ಮಗಳು, ಜನಾಂಗ, ಸ್ಥಳ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರು ಉಳಿದ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ ಮತ್ತು ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ಶ್ರೀವಾಸ್ತವ ಹೇಳಿದರು.
