Monday, February 24, 2025
Homeರಾಷ್ಟ್ರೀಯ | Nationalಯುಪಿ : ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

ಯುಪಿ : ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

UP Road Accident: 4 Killed, 5 Injured As Car Falls Into Canal Near Jarera Village in Hathras

ತ್ರಾಸ್ (ಯುಪಿ), ಫೆ.14-ಕಾರು ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಐವರು ಗಾಯಗೊಂಡಿರವ
ಘಟನೆ ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯ ಜರೇರಾ ಗ್ರಾಮದ ಬಳಿ ನಡೆದಿದೆ.

ಕಳೆದ ರಾತ್ರಿ ಕುಟುಂಬ ಸಮೇತರಾಗಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಆಲಿಗಢದಿಂದ ಇಟಾಹ್ ಜಿಲ್ಲೆಯ ಜಲೇಸರ್‌ಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಬಬ್ಬು (45), ಅವರ ಸಹೋದರನ ಪತ್ನಿ ಪೂನಂ (35), ಪೂನಂ ಅವರ ಪುತ್ರಿಯರಾದ ಕಾವ್ಯ (3) ಮತ್ತು ಭೂಮಿ (1) ಎಂದು ಗುರುತ್ತಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಿರಂಜೀವ್ ನಾಥ್ ಸಿನ್ಹಾ ತಿಳಿಸಿದ್ದಾರೆ.

ಗಾಯಾಳುಗಳು ಸಿಕಂದರಾವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು.ವೇಗದಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಾಲುವೆಗೆ ಉರುಳಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

RELATED ARTICLES

Latest News