ರಾಂಪುರ, ಸೆ. 15: ಕೋರ್ಟ್ ಆವರಣದಲ್ಲೇ ಮೂರು ಬಾರಿ ತಲಾಖ್ ಹೇಳಿದ ಗಂಡನಿಗೆ ಮುಸ್ಲಿಂ ಮಹಿಳೆಯೊಬ್ಬರು ಚಪ್ಪಲಿ ಸೇವೆ ಮಾಡಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.
ಕೋರ್ಟ್ ಆವರಣದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಇದೀಗ ಎಲ್ಲೆಡೆ ಭಾರಿ ವೈರಲ್ ಆಗಿದೆ.
ಪತಿ ನನ್ನ ಮೇಲೆ ಮತ್ತೆ ಹಲ್ಲೆ ನಡೆಸಿ, ನ್ಯಾಯಾಲಯದ ಹೊರಗೆ ಮೂರು ಬಾರಿ ತಲಾಖ್ ಎಂದು ಉಚ್ಚರಿಸಿದ್ದಾನೆ. ಅದಕ್ಕಾಗಿ ಕೋಪಬಂದು ಥಳಿಸಿದ್ದಾಗಿ ಮಹಿಳೆ ತಿಳಿಸಿದ್ದಾರೆ. ತಾನು 2018 ರಲ್ಲಿ ಮದುವೆಯಾಗಿದ್ದು, ಮದುವೆಯಾಗಿ ಸ್ವಲ್ಪ ದಿನದಲ್ಲೇ ಗಂಡ ತನ್ನ ಮೇಲೆ ಹಲ್ಲೆ ನಡೆಸಲು ಶುರು ಮಾಡಿದ್ದ. ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದ.
ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ನಂತರ ಮನೆಯಿಂದ ಹೊರಗೆ ಹಾಕಿದ್ದ.ನಂತರ ಜೀವನಾಂಶಕ್ಕಾಗಿ ಮೊಕದ್ದಮೆ ಹೂಡಿದಾಗ ಮಕ್ಕಳನ್ನು ಕರೆದುಕೊಂಡು ಹೋಗಿದ್ದ ಎಂದು ಆಕೆ ಹೇಳಿಕೊಂಡಿದ್ದಾರೆ.ನ್ಯಾಯಾಲಯದಿಂದ ಸಹಾಯ ಪಡೆಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅವರು ಹೇಳಿದರು ಮತ್ತು ಆರ್ಥಿಕ ಸಹಾಯಕ್ಕಾಗಿ ಮೊಕದ್ದಮೆ ಹೂಡಿದ್ದಾಗಿ ತಿಳಿಸಿದ್ದಾರೆ.
ಆಕೆ ನ್ಯಾಯಾಲಯದಿಂದ ಹೊರಬರುತ್ತಿದ್ದಂತೆ, ಆಕೆಯ ಪತಿ ಮತ್ತು ಮಾವ ಆಕೆಯನ್ನು ಹಿಂಬಾಲಿಸಿದ್ದರು. ನಿಂದಿಸಿದ್ದರು. ಮತ್ತು ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಿದ್ದರು. ಬಳಿಕ ಮೂರು ಬಾರಿ ತಲಾಖ್ ಎಂದು ಹೇಳಿದ್ದಾನೆ. ಅದಕ್ಕೆ ಕೋಪಗೊಂಡ ಮಹಿಳೆ ತಾನು ಧರಿಸಿದ್ದ ಚಪ್ಪಲಿ ತೆಗೆದು ಪತಿರಾಯನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.