Wednesday, May 1, 2024
Homeರಾಜ್ಯಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿಲ್ಲ : ಗೃಹ ಸಚಿವ ಪರಮೇಶ್ವರ್

ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿಲ್ಲ : ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಫೆ.5- ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಅನುದಾನ ನೀಡುವ ವಿಚಾರದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ ಬ್ಯಾಲೆನ್ಸ್ ಮಾಡುತ್ತಿದ್ದರು. ಈ ಹಿಂದೆ ಪ್ರವಾಹ ಉಂಟಾದಾಗ ವೈಮಾನಿಕ ಸಮೀಕ್ಷೆ ನಡೆಸಿ ಎರಡು ಸಾವಿರ ಕೋಟಿ ರೂ. ಮಂಜೂರು ಮಾಡಿದ್ದರು. ಅವರ ಅವಧಿಯಲ್ಲಿ ಅನ್ಯಾಯವಾಗಿತ್ತು ಎನ್ನುವುದಾದರೆ ಬಿಜೆಪಿಯವರು ಆರೋಪ ಸಾಭೀತುಪಡಿಸಲಿ ಎಂದು ಸವಾಲು ಹಾಕಿದರು.

ಜಿಎಸ್‍ಟಿ ಜಾರಿಯಾದ ನಂತರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲು ಸಂಪೂರ್ಣವಾಗಿ ಸಿಕ್ಕಿಲ್ಲ. ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಕೇಳಿದರು ಈವರೆಗೂ ಕೊಟ್ಟಿಲ್ಲ. ಎನ್‍ಡಿಆರ್‍ಎಫ್ ಫಂಡ್ ಸಹ ಬಂದಿಲ್ಲ. ಆದರೂ ನಾವು ಇದನ್ನೆಲ್ಲ ರಾಜಕೀಯ ಮಾಡೋದಿಕ್ಕೆ ಹೋಗಿಲ್ಲ. ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ನಾವು ದೆಹಲಿಗೆ ಹೋಗಿ ಪ್ರತಿಭಟನೆ ನಡೆಸುತ್ತೇವೆ. ದೇಶದ ಜನತೆಗೆ ಗೊತ್ತಾಗಲಿ ಎಂದು ಅವರು ಹೇಳಿದರು.

716 ಕೋಟಿ ಹಾಲು ಪ್ರೋತ್ಸಾಹ ಧನ ಬಾಕಿ ಕೊಡಿ : ವಿಜಯೇಂದ್ರ ತಿರುಗೇಟು

ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಜನರಿಗೆ ಗೊತ್ತಾಗಿದೆ. ವಿಶೇಷ ಅನುದಾನವನ್ನು ನಾವು ಕೇಳಿಲ್ಲ. ಆದರೆ, ನಮಗೆ ಬರಬೇಕಾದ ಪಾಲು ಕೊಟ್ಟರೆ ಸಾಕು. ಯುಪಿಎ ಮತ್ತು ಎನ್‍ಡಿಎ ಅವಧಿಯ ಅನುದಾನ ಬಗ್ಗೆ ಕೇಂದ್ರ ಸರರ್ಕಾರ ಶ್ವೇತಪತ್ರ ಹೊರಡಿಸಲಿ. ರಾಜ್ಯದ್ದು ನಾವು ಹೊರಡಿಸುತ್ತೇವೆ ಎಂದು ಅವರು ಆಗ್ರಹಿಸಿದರು.

ರಾಜಸ್ವ ಸಂಗ್ರಹ ಕಡಿಮೆಯಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಕರ್ನಾಟಕ ಎರಡನೇ ದೊಡ್ಡ ಟ್ಯಾP್ಸï ಪೇಯರ್ ಅಲ್ಲ ಎಂಬುದನ್ನು ಅವರು ಹೇಳಲಿ. ನಂತರ ರಾಜಸ್ವ ಸಂಗ್ರಹದ ಬಗ್ಗೆ ಚರ್ಚಿಸೋಣ. ನಮಗೆ ಬರಗಾಲ ಇದೆ. ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ ಅಷ್ಟೇ ಎಂದು ತಿರುಗೇಟು ನೀಡಿದರು.

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾಗಿಲ್ಲ: ಪ್ರತಿಭಟನೆ ಮಾಡುವುದಿದ್ದರೆ ಫ್ರೀಡಂಪಾರ್ಕ್‍ನಲ್ಲಿ ಶಾಂತಿಯುತವಾಗಿ ಮಾಡಲಿ. ಮನೆಗೆ ಯಾರಾದರೂ ನುಗ್ಗುತ್ತಾರೆ ಅಂದಾಗ ಪೊಲೀಸರು ಸುಮ್ಮನೆ ಇರುವುದಿಲ್ಲ. ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು. ಆ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಸಂಸದ ಡಿ.ಕೆ.ಸುರೇಶ್ ಅವರ ಮನೆಗೆ ಮುತ್ತಿಗೆ ಹಾಕುತ್ತೇವೆ ಅಂತ ಬಂದಾಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಪೊಲೀಸರಿಂದ ಯಾರ ಮೇಲೂ ಹಲ್ಲೆಯಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಫ್ರಾನ್ಸ್‌ನಲ್ಲಿ ಯುಪಿಐ ಪಾವತಿ ಮಾದರಿ ಅಳವಡಿಕೆ

ರಾಜ್ಯದ ದುಡ್ಡನ್ನು ಗ್ಯಾರಂಟಿಗೆ ದಾನ ಮಾಡಿರುವುದರಿಂದ ಹಣವಿಲ್ಲ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ಮುನಿರತ್ನ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುನಿರತ್ನ ಯಾವಾಗ ಆರ್ಥಿಕ ತಜ್ಞರಾದರೋ ಗೊತ್ತಿಲ್ಲ. ನಾವ್ಯಾರೂ ಆರ್ಥಿಕ ತಜ್ಞರಲ್ಲ. ಮುನಿರತ್ನ ಹೇಳಿದ್ದಾರೆ ಎಂದ ಮೇಲೆ ಕೇಳೋಣ ಎಂದರು.

RELATED ARTICLES

Latest News