ನಿಷ್ಪಕ್ಷಪಾತವಾಗಿ ಕಾನೂನು ಕಾಪಾಡಿ : ಪ್ರತಾಪ್ ರೆಡ್ಡಿ

Social Share

ಬೆಂಗಳೂರು,ಮಾ.14- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಜವಾಬ್ದಾರಿಯುತ ವಾಗಿ ಕರ್ತವ್ಯ ನಿರ್ವಹಿಸುವ ಜೊತೆಗೆ ನಿಷ್ಪಕ್ಷಪಾತವಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ನಗರದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಾ, ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದರು.

ಇನ್‍ಸ್ಪೆಕ್ಟರ್‍ಗಳು ತಮ್ಮ ತಮ್ಮ ಠಾಣೆ ವ್ಯಾಪ್ತಿಗಳಲ್ಲಿ ರೌಡಿ ಚಟುವಟಿಕೆಗಳ ಬಗ್ಗೆ ಗಮನಹರಿಸಿ, ಚಟುವಟಿಕೆಗಳು ನಡೆಯದಂತೆ ಮಟ್ಟ ಹಾಕಬೇಕು. ಯಾವುದೇ ಸಣ್ಣ ಘಟನೆ ನಡೆದರೂ ಜಾಗೃತರಾಗಿ ತಕ್ಷಣ ಸ್ಥಳಕ್ಕೆ ಹೋಗಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಯುಕ್ತರು ಎಚ್ಚರಿಕೆ ನೀಡಿದರು.

ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲ್ಮನಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ಚುನಾವಣೆ ಸಂಬಂಧ ನಡೆಯುವ ರಾಜಕೀಯ ಪಕ್ಷಗಳ ಮೆರವಣಿಗೆ, ಸಭೆ-ಸಮಾರಂಭಗಳ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡುವ ಮೂಲಕ ಯಾವುದೇ ರೀತಿಯ ಅಹಿತಕರ ಘಟನೆಗಳಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಅವರು ಹೇಳಿದರು.

ಸಣ್ಣಪುಟ್ಟ ಅಪರಾಧ ಪ್ರಕರಣಗಳು ನಡೆಯದಂತೆ ಜಾಗೃತರಾಗಿ ಎಲ್ಲರೂ ಕರ್ತವ್ಯ ನಿರ್ವಹಿಸಬೇಕೆಂದು ಪ್ರತಾಪ್ ರೆಡ್ಡಿ ಅವರು ತಿಳಿಸಿದ್ದಾರೆ.

ಕಳೆದ ಶುಕ್ರವಾರ ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ನಗರದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿಗಳನ್ನು ಪಡೆದುಕೊಂಡು ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದರು.

ಈ ಹಿನ್ನಲೆಯಲ್ಲಿ ಇಂದು ನಗರ ಪೊಲೀಸ್ ಆಯುಕ್ತರು ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳು, ಮುನ್ನೆಚ್ಚರಿಕೆ, ಸಲಹೆ, ಸೂಚನೆಗಳನ್ನು ನೀಡಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಸಭೆಯಲ್ಲಿ ನಗರದಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಇನ್‍ಸ್ಪೆಕ್ಟರ್‍ಗಳು, ಎಸಿಪಿಗಳು, ಡಿಸಿಪಿಗಳು, ಜಂಟಿ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರು ಪಾಲ್ಗೊಂಡಿದ್ದರು.

upcoming, assembly, election, Bengaluru, Police, Officers, meeting,

Articles You Might Like

Share This Article