Wednesday, December 4, 2024
Homeರಾಷ್ಟ್ರೀಯ | Nationalತಿಂಗಳಾಂತ್ಯಕ್ಕೆ ಪಂಚರಾಜ್ಯ ಚುನಾವಣೆ ಘೋಷಣೆ ಸಾಧ್ಯತೆ

ತಿಂಗಳಾಂತ್ಯಕ್ಕೆ ಪಂಚರಾಜ್ಯ ಚುನಾವಣೆ ಘೋಷಣೆ ಸಾಧ್ಯತೆ

ನವದೆಹಲಿ,ಅ.4-ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಅಗತ್ಯಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ ಈ ತಿಂಗಳ ಅಂತ್ಯಕ್ಕೆ ದಿನಾಂಕವನ್ನು ಘೋಷಣೆ ಮಾಡುವ ಸಂಭವವಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜಿವ್‍ಕುಮಾರ್ ನೇತೃತ್ವದ ಚುನಾವಣಾ ಅಧಿಕಾರಿಗಳ ನಿಯೋಗವು ವಿಧಾನಸಭೆ ಚುನಾವಣೆ ನಡೆಯುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಡ, ತೆಲಂಗಾಣ ಮತ್ತು ಮಿಜೊರಾಂಗಳಿಗೆ ಭೇಟಿ ಕೊಟ್ಟು ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ.

ಇಡಿ,ಐಟಿ ಅಧಿಕಾರಿಗಳು ಬೀದಿ ನಾಯಿ, ಬೆಕ್ಕುಗಳಂತೆ ತಿರುಗುತ್ತಿದ್ದಾರೆ ; ಬಘೇಲ್

ರಾಜ್ಯದಲ್ಲಿ ಜರುಗಲಿರುವ ಧಾರ್ಮಿಕ ಆಚರಣೆಗಳು, ವಿದ್ಯಾರ್ಥಿಗಳ ಪರೀಕ್ಷೆ, ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಕೇಂದ್ರಗಳು, ಅಗತ್ಯ ಸಿಬ್ಬಂದಿ ಸೇರಿದಂತೆ ಮತ್ತಿತರ ಸೌಲಭ್ಯಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.

ಆಯಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಆಯೋಗಕ್ಕೆ ವರದಿ ಸಲ್ಲಿಸಿದ್ದು, ಚುನಾವಣೆಗೆ ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಆಯೋಗ ತೃಪ್ತಿ ವ್ಯಕ್ತಪಡಿಸಿದ್ದು, ಈ ತಿಂಗಳ ಅಂತ್ಯಕ್ಕೆ ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಕರೆ ನೀಡಿದ್ದ ಸ್ವಚ್ಚತಾ ಅಭಿಯಾನದಲ್ಲಿ 8.75 ಕೋಟಿ ಜನ ಭಾಗಿ

ಐದು ರಾಜ್ಯಗಳಿಗೂ ಭೇಟಿ ಕೊಟ್ಟು ಪೂರ್ವ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ನಮಗೆ ತೃಪ್ತಿ ಇದೆ. ಬಹುತೇಕ ತಿಂಗಳ ಅಂತ್ಯಕ್ಕೆ ದಿನಾಂಕವನ್ನು ಆಯೋಗದವರು ಅಧಿಕೃತವಾಗಿ ಘೋಷಣೆ ಮಾಡಬಹುದೆಂದು ಹೆಸರು ಹೇಳಲು ಇಚ್ಛಿಸದ ಆಯೋಗದ ಸದಸ್ಯರೊಬ್ಬರು ತಿಳಿಸಿದ್ದಾರೆ.

RELATED ARTICLES

Latest News