Sunday, April 28, 2024
Homeರಾಜ್ಯರಂಗೇರಿದ ರಾಜ್ಯಸಭೆ : ಜೆಡಿಎಸ್-ಬಿಜೆಪಿ ಮೈತ್ರಿಯ 5ನೇ ಅಭ್ಯರ್ಥಿ ಕಣಕ್ಕೆ

ರಂಗೇರಿದ ರಾಜ್ಯಸಭೆ : ಜೆಡಿಎಸ್-ಬಿಜೆಪಿ ಮೈತ್ರಿಯ 5ನೇ ಅಭ್ಯರ್ಥಿ ಕಣಕ್ಕೆ

ಬೆಂಗಳೂರು,ಫೆ.2- ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‍ಗೆ ಠಕ್ಕರ್ ಕೊಡಲು ಮುಂದಾಗಿರುವ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ.ಫೆ.27ರಂದು ನಡೆಯಲಿರುವ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಈಗಿನ ಬಲಾಬಲದ ಪ್ರಕಾರ ಆಡಳತಾರೂಢ ಕಾಂಗ್ರೆಸ್‍ನಿಂದ ಮೂವರು ಹಾಗೂ ಬಿಜೆಪಿಯಿಂದ ಓರ್ವ ಅಭ್ಯರ್ಥಿ ಸುಲಭವಾಗಿ ಗೆಲ್ಲಲಿದ್ದಾರೆ.

ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ಬಂಡವಾಳ ಮಾಡಿಕೊಳ್ಳಲು ಮುಂದಾಗಿರುವ ದೋಸ್ತಿಗಳು 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಚುನಾವಣಾ ಕಾವು ಹೆಚ್ಚಿಸಲು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ.ಈಗಾಗಲೇ ಬಿಜೆಪಿ ನಾಯಕರು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಉಭಯ ಪಕ್ಷಗಳಿಂದ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒಮ್ಮತದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನೇ ಮೈತ್ರಿ ಪಕ್ಷದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಬಗ್ಗೆ ಎರಡು ಪಕ್ಷಗಳಲ್ಲಿ ಚಿಂತನೆ ನಡೆದಿದೆ.

ಈ ಹಿಂದೆ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸುವ ಬಗ್ಗೆ ಮಾತುಕತೆ ನಡೆಸಲಾಗಿತ್ತು. ವೀರಶೈವ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕರಾಗಿರುವ ಅವರನ್ನೇ ಅಭ್ಯರ್ಥಿ ಮಾಡಿದರೆ ಅದೇ ಸಮುದಾಯದ ಕೆಲವು ಶಾಸಕರಿಂದ ಅಡ್ಡ ಮತದಾನ ನಡೆಸಬಹುದೆಂಬ ಲೆಕ್ಕಚಾರ ಪಕ್ಷದ ವಲಯದಲ್ಲಿತ್ತು. ಆದರೆ ಕೊನೆಕ್ಷಣದಲ್ಲಿ ಸೋಮಣ್ಣ ನಾನು ಹರಕೆ ಕುರಿಯಾಗಲಾರೆ ಎಂದು ಹಿಂದೆ ಸರಿದ ಪರಿಣಾಮ ಕುಪೇಂದ್ರ ರೆಡ್ಡಿ ಅವರನ್ನು ಅಭ್ಯರ್ಥಿ ಮಾಡಲು ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ.

BREAKING : ನಟಿ ಪೂನಂ ಪಾಂಡೆ ಇನ್ನಿಲ್ಲ..!

5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ವಲಯದಲ್ಲೂ ಒಪ್ಪಿಗೆ ಸಿಕ್ಕಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಧಾಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಹುತೇಕರು ಕುಮಾರಸ್ವಾಮಿಯವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯಸಭೆ ಚುನಾವಣೆ ಲೆಕ್ಕಾಚಾರ:
ಕರ್ನಾಟಕ ವಿಧಾನಸಭೆಯ ಒಟ್ಟು ಸಂಖ್ಯೆ 224. ಓರ್ವ ಆಂಗ್ಲೋ ಇಂಡಿಯನ್ ಅಭ್ಯರ್ಥಿ ನಾಮಕರಣಗೊಂಡರೂ ಅವರಿಗೆ ಮತದಾನದ ಹಕ್ಕು ಇರುವುದಿಲ್ಲ. ಪ್ರಸ್ತುತ ವಿಧಾನಸಭೆಯ ಬಲಾಬಲದಲ್ಲಿ ಆಡಳಿತಾರೂಢ ಕಾಂಗ್ರೆಸ್ 135 ಜೊತೆಗೆ ಇಬ್ಬರು ಪಕ್ಷೇತರ ಶಾಸಕರ ಬೆಂಬಲವೂ ಇದೆ.

ವಿಜಯನಗರ ಜಿಲ್ಲೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಕೆ.ಪಿ.ಪುಟ್ಟಸ್ವಾಮಿ ಬಾಹ್ಯ ಬೆಂಬಲ ನೀಡಿದ್ದಾರೆ. ಬಿಜೆಪಿ 66 ಹಾಗೂ ಜೆಡಿಎಸ್ 19 ಶಾಸಕರನ್ನು ಹೊಂದಿದೆ. ರಾಜ್ಯಸಭೆ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ ಗೆಲ್ಲಬೇಕಾದರೆ 45 ಮತಗಳನ್ನು ಪಡೆಯಬೇಕು. ಕಾಂಗ್ರೆಸ್ ಮೂರು ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ.

ಬಿಜೆಪಿ ಅಭ್ಯರ್ಥಿ 45 ಮತಗಳನ್ನು ಪಡೆದರೆ ಹೆಚ್ಚುವರಿಯಾಗಿ ಉಳಿಯುವ 21 ಮತಗಳು ಹಾಗೂ ಜೆಡಿಎಸ್‍ನ 19 ಮತಗಳು ಸೇರಿದರೆ 40 ಮತಗಳಾಗುತ್ತವೆ. ಜೊತೆಗೆ ಲತಾ ಮಲ್ಲಿಕಾರ್ಜುನ್ ಮತ್ತು ಪುಟ್ಟಸ್ವಾಮಿ ಮನವೊಲಿಸಿದರೆ 42 ಮತಗಳನ್ನು ಮೈತ್ರಿ ಅಭ್ಯರ್ಥಿ ಪಡೆಯುತ್ತಾರೆ. ಇದೇ ಸಂದರ್ಭದಲ್ಲಿ ಕೆಲವು ಅಸಮಾಧಾನಿತ ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದರೆ ಫಲಿತಾಂಶದಲ್ಲಿ ಏನು ಬೇಕಾದರೂ ಆಗಬಹುದು.

ಸಂಸತ್ತಿನಲ್ಲಿ ಸೊರೆನ್ ಬಂಧನ ವಿಷಯ ಪ್ರಸ್ತಾಪಿಸಲು ಇಂಡಿಯಾ ಒಕ್ಕೂಟ ನಿರ್ಧಾರ

ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರಿಗೆ ವಿಪ್ ಜಾರಿ ಮಾಡುವಂತಿಲ್ಲ. ಆದರೆ ಮತದಾನದ ವೇಳೆ ಆಯಾ ಪಕ್ಷದ ಚುನಾವಣಾ ಏಜೆಂಟರಿಗೆ ಕಡ್ಡಾಯವಾಗಿ ತೋರಿಸಿ ಮತ ಚಲಾಯಿಸಬೇಕು. ಏಜೆಂಟರಿಗೆ ತೋರಿಸದೆ ಮತ ಹಾಕಿದರೆ ಅದನ್ನು ಅಸಿಂಧುಗೊಳಿಸುವಂತೆ ಏಜೆಂಟರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಬಹುದು. ಈ ಹಿಂದೆ ಜೆಡಿಎಸ್‍ನ ಏಳು ಶಾಸಕರು ಅಡ್ಡ ಮತದಾನ ನಡೆಸುವ ನಿದರ್ಶನವೂ ಇದೆ. ಈಗ ಇದು ಪುನರಾವರ್ತನೆಯಾಗಲಿದೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.

RELATED ARTICLES

Latest News