Sunday, October 6, 2024
Homeಮನರಂಜನೆಕುತೂಹಲ ಮೂಡಿಸಿದ "45" ಚಿತ್ರದ ಪೋಸ್ಟರ್

ಕುತೂಹಲ ಮೂಡಿಸಿದ “45” ಚಿತ್ರದ ಪೋಸ್ಟರ್

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ “45” ಚಿತ್ರದ ವಿಶೇಷ ಪೋಸ್ಟರ್.

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ.

ಸೆಪ್ಟೆಂಬರ್ 18, ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “45” ಚಿತ್ರತಂಡ ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದೆ. ಉಪೇಂದ್ರ ಅವರ ನಿವಾಸಕ್ಕೆ “45” ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

RELATED ARTICLES

Latest News