Saturday, April 5, 2025
Homeರಾಜ್ಯಹಣಕ್ಕಾಗಿ ಪೋರ್ನ್ ವೆಬ್‍ಸೈಟ್‍ಗೆ ಸರಸ-ಸಲ್ಲಾಪದ ವಿಡಿಯೋ ಅಪ್‍ಲೋಡ್

ಹಣಕ್ಕಾಗಿ ಪೋರ್ನ್ ವೆಬ್‍ಸೈಟ್‍ಗೆ ಸರಸ-ಸಲ್ಲಾಪದ ವಿಡಿಯೋ ಅಪ್‍ಲೋಡ್

ಬೆಂಗಳೂರು,ಮಾ.7- ಮಹಿಳೆಯೊಬ್ಬಳು ಹಣಕ್ಕಾಗಿ ತನ್ನ ಪ್ರಿಯಕರನೊಂದಿಗೆ ಸೇರಿ ಲೈಂಗಿಕ ಚಟುವಟಿಕೆ ನಡೆಸಿರುವ ಚಿತ್ರೀಕರಣದ ವಿಡಿಯೋವನ್ನು ಪೋರ್ನ್ ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡುತ್ತಿದ್ದಾರೆಂಬ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಿಳೆಯ ಪತಿ, ಗುತ್ತಿಗೆದಾರ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹಣ ಗಳಿಸುವ ಉದ್ದೇಶದಿಂದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಈ ಗೌಪ್ಯ ಕೆಲಸ್ಕಕಾಗಿಯೇ ಉಲ್ಲಾಳ ಉಪನಗರದ 5ನೇ ಮುಖ್ಯರಸ್ತೆಯಲ್ಲಿ ಮನೆಯೊಂದನ್ನು ಬೋಗ್ಯಕ್ಕೆ ಪಡೆದುಕೊಂಡು ಅಲ್ಲಿ ಸರಸ-ಸಲ್ಲಾಪದ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಇವರ ಜೊತೆ ಮತ್ತಿಬ್ಬರು ಸೇರಿಕೊಂಡು ಯುವಜನರ ಹಾದಿ ತಪ್ಪಿಸುತ್ತಿದ್ದಾರೆ. ಈ ನಾಲ್ವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ : ಸಿಎಂ ಸಿದ್ದರಾಮಯ್ಯ

ತಮಗೂ ಜೀವಭಯವಿದ್ದು, ಸೂಕ್ತ ರಕ್ಷಣೆ ನೀಡಬೇಕೆಂದು ದೂರುದಾರರಾದ ಗುತ್ತಿಗೆದಾರ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

RELATED ARTICLES

Latest News