ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಭದ್ರಾ ಮೇಲ್ದಂಡೆ : ಬೊಮ್ಮಾಯಿ

Social Share

ಹೊಸದುರ್ಗ,ಅ.22- ಭದ್ರಾ ಮೇಲ್ದಂಡೆ ಯೋಜನೆ ಯನ್ನು ರಾಷ್ಟ್ರೀಯ ಪ್ರಾಮುಖ್ಯ ಯೋಜನೆ ಯಾಗಿ ಪಿಐಬಿ (ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ) ಯಲ್ಲಿ ಅನುಮೋದನೆ ನೀಡಲಾಗಿದ್ದು, ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಬಾಕಿ ಇದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಜಲಸಂಪನ್ಮೂಲ ಸಚಿವರು ಯೋಜನೆ ಕುರಿತು ಕಾರ್ಯೋ ನ್ಮುಖರಾಗಿದ್ದಾರೆ. ವೈಯಕ್ತಿಕ ವಾಗಿ ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಇದರಿಂದಾಗಿ ಯೋಜನೆಗೆ ಬಹಳ ದೊಡ್ಡ ಪ್ರಮಾಣದಲ್ಲಿ ಹಣಕಾಸಿನ ನೆರವು ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದುರ್ಗ ಭಾಗದ ಜನರ ಬಹುದಿನದ ಬೇಡಿಕೆ ತುಮಕೂರು ದಾವಣಗೆರೆ ನೇರ ರೈಲು ಮಾರ್ಗ. ಈ ಯೋಜನೆಯ ಅನುಷ್ಠಾನಕ್ಕೆ ಕೆಲವು ಭಾಗದಲ್ಲಿ ಭೂಸ್ವಾೀಧಿನ ಪ್ರಕ್ರಿಯೆಯ ಬಾಕಿಯಿದೆ. ಭೂ ಸ್ವಾೀಧಿನ ಪ್ರಕ್ರಿಯೆ ಶೀಘ್ರವಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಉದ್ಯೋಗ ದಕ್ಕಿಸಿಕೊಂಡ ರಾಜ್ಯದ 1000 ಯುವಕ-ಯುವತಿಯರು

ಆದಷ್ಟು ಬೇಗ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಭೂ ಸ್ವಾೀಧಿನಕ್ಕೆ ಅಗತ್ಯ ಇರುವ 100 ಕೋಟಿ ರೂ.ಗಳನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದು ಪ್ರಕಟಿಸಿದರು. ಅಬ್ಬಿನಹೋಳೆ ಯೋಜನೆ ಯಲ್ಲಿ ಭೂಮಿ ನೀಡಲು ಕೆಲ ರೈತರು ವಿವಿಧ ಕಾರಣಗಳಿಂದ ಅಡಚಣೆ ಉಂಟಾಗಿದೆ. ಇದನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ ಸನ್ನಿವೇಶದಲ್ಲಿ ಕೆಲವು ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಲಭಿಸಿಲ್ಲ. ಈ ವಿಚಾರ ಗಮನದಲ್ಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ದೆಹಲಿ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದಾಗಿ ಹೇಳಿದರು.

ಬೆಂಗಳೂರಲ್ಲಿ ವಿಮಾನಕ್ಕಿಂತಲೂ ದುಬಾರಿಯಾಯ್ತು ಖಾಸಗಿ ಬಸ್ ಪ್ರಯಾಣ..!

ಸರ್ಕಾರಿ ನೌಕರರ 7ನೇ ವೇತನ ಆಯೋಗವನ್ನು ಶೀಘ್ರವಾಗಿ ರಚನೆ ಮಾಡಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಬೊಮ್ಮಾಯ ಉತ್ತರಿಸಿದರು.

ಈ ಸಂದರ್ಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್, ಡಿಸಿ ಕವಿತಾ ಮನ್ನಿಕೇರಿ, ಎಸ್.ಪಿ. ಪರಶುರಾಮ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

Articles You Might Like

Share This Article