Tuesday, November 26, 2024
Homeರಾಜಕೀಯ | Politicsಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯಲು ಸಂಕಲ್ಪ ಮಾಡೋಣ : ಆರ್.ಅಶೋಕ್ ಗುಡುಗು

ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯಲು ಸಂಕಲ್ಪ ಮಾಡೋಣ : ಆರ್.ಅಶೋಕ್ ಗುಡುಗು

Uproot anti-constitutional Cong: K’taka BJP urges people on Constitution Day

ಬೆಂಗಳೂರು,ನ.26- ಸಂವಿಧಾನದ ಮೌಲ್ಯಗಳು ಮತ್ತು ಅದರ ಆಶಯಗಳ ಬಗ್ಗೆ ಗೌರವ ಇಲ್ಲದ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯುವ ಸಂಕಲ್ಪ ಮಾಡೋಣ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಕರೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದ ಕಾಂಗ್ರೆಸ್ನ ಸಂವಿಧಾನ ವಿರೋಧಿ ಧೋರಣೆ ಹೊಸದೇನೂ ಅಲ್ಲ. ಅದಕ್ಕೆ ದೊಡ್ಡ ಕರಾಳ ಇತಿಹಾಸವೇ ಇದೆ ಎಂದು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ 18 ತಿಂಗಳಲ್ಲಿ ಸಂವಿಧಾನಕ್ಕೆ ಚ್ಯುತಿ ತರುವ ಕೆಲಸವನ್ನು ಪದೇ ಪದೇ ಮಾಡುತ್ತಲೇ ಬಂದಿದೆ. ಈ ಸಂವಿಧಾನದ ದಿನದಂದು ಇಂತಹ ಸರ್ಕಾರವನ್ನು ಕಿತ್ತೋಗೆಯಬೇಕು ಎಂದು ಹೇಳಿದ್ದಾರೆ.

ಹೆಜ್ಜೆ ಹೆಜ್ಜೆಗೂ ಸಂವಿಧಾನಕ್ಕೆ ಅಪಚಾರ, ಅವಮಾನ, ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತಲೇ ಇರುವ ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ.

ಭಾರತದ ಸಂವಿಧಾನದ ಪೀಠಿಕೆ ಆರಂಭವಾಗುವುದೇ ಭಾರತದ ಜನತೆಯಾದ ನಾವು ಎಂದು. ಆದರೆ ಸಂವಿಧಾನವನ್ನು ರಕ್ಷಿಸಬೇಕಾದ ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುತ್ತಾರೆ. ಆ ದೇಶದ್ರೋಹಿಗಳ ಹೆಡೆಮುರಿ ಕಟ್ಟಬೇಕಾದ ಕಾಂಗ್ರೆಸ್ ಸರ್ಕಾರ ಅದನ್ನು ಸಮರ್ಥನೆ ಮಾಡಿಕೊಳ್ಳುತ್ತದೆ. ಸುದ್ದಿ ಬಿತ್ತರ ಮಾಡಿದ ಮಾಧ್ಯಮಗಳ ಮೇಲೇ ಗೂಬೆ ಕೂರಿಸುವ ಕೆಲಸ ಮಾಡುತ್ತದೆ.

ದೇಶದ ಸಾರ್ವಭೌಮತೆ, ಅಖಂಡತೆಯನ್ನ ಕಾಪಾಡಬೇಕಾದ ಚುನಾಯಿತ ಸರ್ಕಾರ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಉಗ್ರರು ಬಾಂಬ್ ಸ್ಫೋಟಿಸಿದಾಗ ಅದನ್ನ ಸಿಲಿಂಡರ್ ಬ್ಲಾಸ್ಟ್, ಟಿ ಡಿಚಿಟಡಿಥಿ ಎಂದು ತಿಪ್ಪೆ ಸಾರಿಸುವ ಮೂಲಕ ದೇಶದ್ರೋಹಿಗಳನ್ನು ರಕ್ಷಿಸುವ ಪ್ರಯತ್ನ ಮಾಡಿದೆ.

ಪರಿಶಿಷ್ಟ ಸಮುದಾಯಗಳ ಅಭ್ಯುದಯಕ್ಕೆ ಕೆಲಸ ಮಾಡಬೇಕಾದ ಸರ್ಕಾರ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿವಿಯೋಗವಾಗಬೇಕಾದ ವಾಲೀಕಿ ಅಭಿವೃದ್ಧಿ ನಿಗಮದ 182 ಕೋಟಿ ಲೂಟಿ ಮಾಡಿ ಪರಿಶಿಷ್ಟ ಪಂಗಡಗಳಿಗೆ ಅನ್ಯಾಯ ಮಾಡಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ಸುಮಾರು 6,162 ಕೋಟಿ ರೂಪಾಯಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಹಣವನ್ನ ದುರುಪಯೋಗ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ದಲಿತರಿಗೆ ಅನ್ಯಾಯ ಮಾಡುವ ಮೂಲಕ ಸಂವಿಧಾನದ ಆಶಯಗಳಿಗೆ ಎಳ್ಳು ನೀರು ಬಿಟ್ಟಿದೆ.

ಮೂಡಾ ಹಗರಣದಲ್ಲಿ ಹೈಕೋರ್ಟ್ ಕೊಟ್ಟಿರುವ ತೀರ್ಪನ್ನು ರಾಜಕೀಯ ತೀರ್ಪು ಎಂದು ಹೀಗಳೆಯುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದೆ ಈ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ.

ರಾಷ್ಟ್ರ ಧ್ವಜ, ರಾಷ್ಟ್ರಗೀತೆ, ರಾಷ್ಟ್ರೀಯ ಲಾಂಛನಗಳಿಗೆ ಗೌರವ ಕೊಡಬೇಕಾದ ಸರ್ಕಾರ, ಪ್ಯಾಲೆಸ್ತೀನ್ ಧ್ವಜ ಹಾರಿಸಿದರೆ ತಪ್ಪೇನು ಎಂದು ಕೇಳುತ್ತದೆ. ಸಂವಿಧಾನ ಸಮಾವೇಶದ ಹೆಸರಿನಲ್ಲಿ ನಗರ ನಕ್ಸಲ್ಗಳಿಗೆ, ಭಾರತದ ಸೈನಿಕರು ರೇಪಿಸ್ಟ್ ಗಳು ಎನ್ನುವ ವಿಕೃತ ಮನಸ್ಕರಿಗೆ ಸರ್ಕಾರಿ ಖರ್ಚಿನಲ್ಲಿ ವೇದಿಕೆ ಕಲ್ಪಿಸಿಕೊಟ್ಟಿದೆ ಈ ದೇಶದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿದ್ದಾರೆ.

ಶಾಸಕರ ಬಂಡಾಯ ಶಮನ ಮಾಡಲು ಸಂವಿಧಾನದ ನಿಯಮ ಉಲ್ಲಂಘಿಸಿ 90 ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಸೃಷ್ಟಿಸುವ ಮೂಲಕ ಸಾರ್ವಜನಿಕರ ಹಣವನ್ನ ಪೋಲು ಮಾಡುತ್ತಿದೆ ಈ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ಹೊರಹಾಕಿದ್ದಾರೆ.

ತಮ ತುಷ್ಟೀಕರಣ ರಾಜಕಾರಣದ ತೃಷೆಗಾಗಿ ಸಾಂವಿಧಾನಿಕ ಹುದ್ದೆಗಳಿಗೆ ಪದೇ ಪದೇ ಅಪಮಾನ ಮಾಡುವ ಚಾಳಿ ಬೆಳೆಸಿಕೊಂಡಿರುವ ಶಾಸಕ ಜಮೀರ್ ಅಹದ್ ಖಾನ್ ಸಂವಿಧಾನಕ್ಕೆ ಅಪಚಾರ ಎಸಗುತ್ತಲೇ ಇದ್ದಾರೆ ಎಂದು ಆರೋಪಿಸಿದ ಅಶೋಕ್, ಮುಸ್ಲಿಂ ಸ್ಪೀಕರ್ ಮುಂದೆ ಬಿಜೆಪಿ ಶಾಸಕರು ತಲೆಬಾಗಬೇಕು ಎಂದು ಸ್ಪೀಕರ್ ಹುದ್ದೆಗೆ ಅಪಚಾರ ಎಸಗಿದ್ದ ಜಮೀರ್ ಇಷ್ಟಕ್ಕೂ ಸುಮನಿರದೇ ಮುಸ್ಲಿಮರ ಕೆಲಸವನ್ನು ಸಚಿವರು ತಲೆಬಾಗಿ ಮಾಡಬೇಕು ಎಂದು ದುರಹಂಕಾರದ ಮಾತುಗಳನ್ನು ಆಡುವ ಮೂಲಕ ಸಂವಿಧಾನದ ಮೌಲ್ಯಗಳಿಗೆ ಅಪಮಾನ ಮಾಡಿದ್ದಾರೆ ಎಂದು ಗುಡುಗಿದ್ದಾರೆ.

RELATED ARTICLES

Latest News