Saturday, August 30, 2025
Homeಅಂತಾರಾಷ್ಟ್ರೀಯ | Internationalಟ್ರಂಪ್‌ 'ಕಾನೂನು ಬಾಹಿರ' ಅಮದು ಸುಂಕ ಹೇರಿಕೆಗೆ ಕೋರ್ಟ್‌ ಛೀಮಾರಿ

ಟ್ರಂಪ್‌ ‘ಕಾನೂನು ಬಾಹಿರ’ ಅಮದು ಸುಂಕ ಹೇರಿಕೆಗೆ ಕೋರ್ಟ್‌ ಛೀಮಾರಿ

US court rules many of Trump's global tariffs are illegal

ವಾಷಿಂಗ್ಟನ್‌, ಆ.30– ಅಮೆರಿಕ ಅಧ್ಯಕ್ಷ ಟ್ರಂಪ್‌ ಘೋಷಣೆ ಮಾಡಿರುವ ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್‌‍ ಕೋರ್ಟ್‌ ಹೇಳಿದೆ. ಮಾತ್ರವಲ್ಲ, ಟ್ರಂಪ್‌ ನಿರ್ಧಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ.

ಟ್ರಂಪ್‌ ನಿರ್ಧಾರಕ್ಕೆ ವಾಷಿಂಗ್ಟನ್‌ನ ಫೆಡರಲ್‌ ಮೇಲ್ಮನವಿ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಕೆಳ ನ್ಯಾಯಾಲಯದ ತೀರ್ಪನ್ನು ನ್ಯಾಯಾಲಯವು ಅನುಮೋದಿಸಿದ್ದು, ಟ್ರಂಪ್‌ ವಿಧಿಸಿರುವ ಹೆಚ್ಚಿನ ಆಮದು ಸುಂಕಗಳು ಕಾನೂನುಬಾಹಿರ ಎಂದು ಹೇಳಿದೆ.

ಈ ಸಂದರ್ಭದಲ್ಲಿ ತನ್ನ ಅಧಿಕಾರವನ್ನು ಬಳಸಲು ನಿರ್ಧರಿಸಿದ ಅಧ್ಯಕ್ಷರ ಅಧಿಕಾರವನ್ನು ನ್ಯಾಯಾಲಯವು ಪ್ರಶ್ನಿಸಿದೆ.ಫೆಡರಲ್‌ ಮೇಲ್ಮನವಿ ನ್ಯಾಯಾಲಯವು ಅಮೆರಿಕ ಅಧ್ಯಕ್ಷರು ತುರ್ತು ಅಧಿಕಾರಗಳ ದುರುಪಯೋಗದ ಬಗ್ಗೆ ಮಾತನಾಡಿದೆ.

11 ನ್ಯಾಯಾಧೀಶರ ಪೀಠದಲ್ಲಿ 7 ನ್ಯಾಯಾಧೀಶರು ಟ್ರಂಪ್‌ ಅವರ ಸುಂಕ ವಿಧಿಸುವ ನಿರ್ಧಾರವನ್ನು ಕಾನೂನುಬಾಹಿರವೆಂದು ಘೋಷಿಸಿದರೆ, 4 ನ್ಯಾಯಾಧೀಶರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಆದೇಶ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಶ್ವೇತ ಭವನ ನಿರ್ಧರಿಸಿದೆ.

ಇತರೆ ದೇಶಗಳ ಮೇಲೆ ವಿಧಿಸಿರುವ ಎಲ್ಲಾ ಸುಂಕಗಳು ಜಾರಿಯಲ್ಲಿರುತ್ತವೆ. ಒಂದು ವೇಳೆ ಟ್ಯಾರಿಫ್‌ ತೆಗೆದುಹಾಕಿದರೆ, ದೇಶಕ್ಕೆ ಹಾನಿಕಾರಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಪುನರುಚ್ಚರಿಸಿದ್ದಾರೆ. ಟ್ರಂಪ್‌ ಅವರ ಹಲವು ಸುಂಕಗಳು ಕಾನೂನುಬಾಹಿರ ಎಂದು ಯುಎಸ್‌‍ ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ ಟ್ರಂಪ್‌ ಪ್ರತಿಕ್ರಿಯಿಸಿದ್ದಾರೆ.

ಎಲ್ಲಾ ಸುಂಕಗಳು ಇನ್ನೂ ಜಾರಿಯಲ್ಲಿವೆ. ಇಂದು ಅತ್ಯಂತ ಪಕ್ಷಪಾತದ ಮೇಲ್ಮನವಿಗೆ ನ್ಯಾಯಾಲಯವು ನಮ್ಮ ಸುಂಕಗಳನ್ನು ತೆಗೆದುಹಾಕಬೇಕು ಎಂದು ತಪ್ಪಾಗಿ ಹೇಳಿದೆ. ಆದರೆ, ಕೊನೆಯಲ್ಲಿ ಯುನೈಟೆಡ್‌ ಸ್ಟೇಟ್‌್ಸ ಆಫ್‌ ಅಮೆರಿಕ ಗೆಲ್ಲುತ್ತದೆ ಎಂದು ಅವರಿಗೆ ತಿಳಿದಿದೆ. ಈ ಸುಂಕಗಳು ಎಂದಾದರೂ ರದ್ದಾದರೆ, ಅದು ದೇಶಕ್ಕೆ ವಿಪತ್ತು. ಅದು ನಮ್ಮನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತದೆ. ನಾವು ಬಲಿಪಶು ಆಗಬೇಕಾಗುತ್ತದೆ ಎಂದು ಟ್ರಂಪ್‌ ಟ್ರುತ್‌ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ನಮ್ಮ ತಯಾರಕರು, ರೈತರು ಮತ್ತು ಎಲ್ಲರನ್ನೂ ದುರ್ಬಲಗೊಳಿಸುವ ಅನ್ಯಾಯದ ಸುಂಕಗಳನ್ನು ನಾವು ಒಪ್ಪಲ್ಲ. ಇತರ ದೇಶಗಳು, ಅವರು ಮಿತ್ರರಾಗಿರಲಿ ಅಥವಾ ವೈರಿಯಾಗಿರಲಿ ವಿಧಿಸುವ ಸುಂಕೇತರ ವ್ಯಾಪಾರ ಅಡೆತಡೆಗಳನ್ನು ಅಮೆರಿಕ ಇನ್ಮುಂದೆ ಸಹಿಸುವುದಿಲ್ಲ. ಒಂದು ವೇಳೆ ಈ ನಿರ್ಧಾರವನ್ನು (ಟ್ಯಾರಿಫ್‌‍) ತಡೆಯಲು ಮುಂದಾದರೆ, ಅಕ್ಷರಶಃ ಅಮೆರಿಕ ಸಂಯುಕ್ತ ಸಂಸ್ಥಾನವನ್ನು ನಾಶಪಡಿಸಿದಂತೆ ಎಂದು ಟ್ರಂಪ್‌ ಹೇಳಿದ್ದಾರೆ.

ಸುಂಕಗಳು ಕಾರ್ಮಿಕರಿಗೆ ಸಹಾಯ ಮಾಡಲು ಮತ್ತು ಮೇಡ್‌ ಇನ್‌ ಅಮೆರಿಕ ಉತ್ಪನ್ನಗಳನ್ನು ಉತ್ಪಾದಿಸುವ ಕಂಪನಿಗಳನ್ನು ಬೆಂಬಲಿಸಲು ಅತ್ಯುತ್ತಮ ಸಾಧನವಾಗಿದೆ ಎಂದು ಟ್ರಂಪ್‌ ನಿಲುವು.ಹಲವು ವರ್ಷಗಳಿಂದ ಕಾಳಜಿಯಿಲ್ಲದ ಮತ್ತು ಅವಿವೇಕದ ರಾಜಕಾರಣಿಗಳು ಸುಂಕಗಳನ್ನು ನಮ್ಮ ವಿರುದ್ಧವೇ ಬಳಸಲು ಅನುಮತಿಸಿದ್ದರು. ಈಗ ಯುನೈಟೆಡ್‌ ಸ್ಟೇಟ್ಸ್ ಸುಪ್ರೀಂ ಕೋರ್ಟ್‌ ಸಹಾಯದಿಂದ, ಅವುಗಳನ್ನು ನಮ್ಮ ರಾಷ್ಟ್ರದ ಪ್ರಯೋಜನಕ್ಕಾಗಿ ಬಳಸುತ್ತೇವೆ. ಅಮೆರಿಕವನ್ನು ಮತ್ತೆ ಶ್ರೀಮಂತ, ಬಲಿಷ್ಠ ಮತ್ತು ಶಕ್ತಿಶಾಲಿಯನ್ನಾಗಿ ಮಾಡುತ್ತೇವೆ ಎಂದು ಟ್ರಂಪ್‌ ಪ್ರತಿಜ್ಞೆ ಮಾಡಿದ್ದಾರೆ.

RELATED ARTICLES

Latest News