ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ, 5 ಮಂದಿ ಸಾವು

ವಾಷಿಂಗ್ಟನ್‌,ಜೂ.26- ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿಯ ಪ್ರಕರಣ ನಡೆದಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಉತ್ತರ ಲಾಸ್‌ ವೇಗಾಸ್‌ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಎರಡು ಅಪಾರ್ಟ್‌ಮೆಂಟ್‌ ಸಂಕೀರ್ಣಗಳಲ್ಲಿ ಗುಂಡು ಹಾರಿಸಿ ನಾಲ್ವರನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೃತ್ಯ ಎಸಗಿದವನನ್ನು ಎರಿಕ್‌ ಆಡಮ್ಸೌ(47)ಎಂದು ಗುರುತಿಸಲಾಗಿದೆ. ಕಾಸಾ ನಾರ್ಟೆ ಡ್ರೈವ್‌ನ ಅಪಾರ್ಟ್‌ಮೆಂಟ್‌ ಸಂಕೀರ್ಣದಲ್ಲಿ ಗುಂಡಿನ ದಾಳಿ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಕರೆಯೊಂದು ಬಂದಿತ್ತು. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ 40 ಮತ್ತು … Continue reading ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ, 5 ಮಂದಿ ಸಾವು