Friday, May 24, 2024
Homeರಾಜ್ಯಮತ್ತೆ ಕೇಜ್ರಿವಾಲ್ ವಿಚಾರ ಕೆದಕಿದ ಅಮೆರಿಕ

ಮತ್ತೆ ಕೇಜ್ರಿವಾಲ್ ವಿಚಾರ ಕೆದಕಿದ ಅಮೆರಿಕ

ನವದೆಹಲಿ,ಮಾ.28- ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಕುರಿತು ಅಮೆರಿಕ ಮತ್ತೆ ಮಾತನಾಡಿದೆ. ಕೇಜ್ರಿವಾಲ್ ಬಂಧನ ಕುರಿತಂತೆ ಅಮೆರಿಕ ಮಾತನಾಡಿದ್ದನ್ನು ಪ್ರಶ್ನಿಸಿ ಭಾರತವು ಅಮೆರಿಕದ ರಾಜತಾಂತ್ರಿಕರನ್ನು ಕರೆಸಿ ಎಚ್ಚರಿಕೆ ನೀಡಿದ ನಂತರವೂ ಅಮೆರಿಕ ಮತ್ತೆ ಕೇಜ್ರಿವಾಲ್ ಬಂಧನದಲ್ಲಿ ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ನಡೆಸುವಂತೆ ಪುನರುಚ್ಚರಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಸೇರಿದಂತೆ ಈ ಕ್ರಮಗಳನ್ನು ನಾವು ನಿಕಟವಾಗಿ ಅನುಸರಿಸುತ್ತಿದ್ದೇವೆ ಎಂದು ಯುಎಸ್ ಸ್ಟೇಟ್ ಡಿಪಾಟ್ರ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ತಿಳಿಸಿದ್ದಾರೆ. ಭಾರತವು ನವದೆಹಲಿಯಲ್ಲಿನ ಯುಎಸ್ ಆಕ್ಟಿಂಗ್ ಡೆಪ್ಯುಟಿ ಚೀಫ್ ಆಫ್ ಮಿಷನ್ ಗ್ಲೋರಿಯಾ ಬರ್ಬೆನಾ ಅವರನ್ನು ಭಾರತಕ್ಕೆ ಸಮನ್ಸ್ ಮಾಡಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ವಿದೇಶಾಂಗ ಸಚಿವಾಲಯದ ಸೌತ್ ಬ್ಲಾಕ್ ಕಛೇರಿಯಲ್ಲಿ ನಿನ್ನೆ ನಡೆದ ಸಭೆಯು ಸುಮಾರು 40 ನಿಮಿಷಗಳ ಕಾಲ ನಡೆದಿದ್ದು, ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಗಳಿಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಿಲ್ಲರ್, ಮುಂಬರುವ ದಿನಗಳಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಲು ಸವಾಲಾಗುವ ರೀತಿಯಲ್ಲಿ ತೆರಿಗೆ ಅಧಿಕಾರಿಗಳು ತಮ್ಮ ಕೆಲವು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳ ಬಗ್ಗೆಯೂ ನಮಗೆ ತಿಳಿದಿದೆ ಎಂದಿದ್ದಾರೆ.

ಈ ಪ್ರತಿಯೊಂದು ಸಮಸ್ಯೆಗಳಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಅಮೆರಿಕ ಪ್ರೋತ್ಸಾಹಿಸುತ್ತದೆ ಎಂದು ಅವರು ಹೇಳಿದರು. ನಿಮ್ಮ ಮೊದಲ ಪ್ರಶ್ನೆಗೆ ಸಂಬಂಧಿಸಿದಂತೆ, ನಾನು ಯಾವುದೇ ಖಾಸಗಿ ರಾಜತಾಂತ್ರಿಕ ಸಂಭಾಷಣೆಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ, ಆದರೆ ನಾವು ಸಾರ್ವಜನಿಕವಾಗಿ ಹೇಳಿರುವುದು ನಾನು ಇಲ್ಲಿಂದ ಹೇಳಿದ್ದೇನೆ, ನಾವು ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಪ್ರೋತ್ಸಾಹಿಸುತ್ತೇವೆ ಎಂದಿದ್ದಾರೆ. ಮನೀಷ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನಂತರ ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ನಂತರ ಕೇಜ್ರಿವಾಲ್ ಅವರನ್ನು ಇಡಿ ಕಳೆದ ವಾರ ಬಂಧಿಸಿತ್ತು.

RELATED ARTICLES

Latest News