ಜೈಪುರ, ಏ. 24: ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಇಂದು ತಮ್ಮ ಭಾರತ ಪ್ರವಾಸ ಮುಗಿಸಿ ತಮ್ಮ ದೇಶಕ್ಕೆ ವಾಪಸ್ಸಾದರು. ವ್ಯಾನ್ಸ್, ಅವರ ಪತ್ನಿ ಉಷಾ ವ್ಯಾನ್ಸ್ ಮತ್ತು ಅವರ ಮೂವರು ಮಕ್ಕಳು ಇಂದು ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ವಾಷಿಂಗ್ಟನ್ ಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವ್ಯಾನ್ಸ್ ಕುಟುಂಬ ಸೋಮವಾರ ರಾತ್ರಿ ದೆಹಲಿಯಿಂದ ಜೈಪುರಕ್ಕೆ ಆಗಮಿಸಿತು. ರ್ಯಕ್ರಮವೊಂದರಲ್ಲಿ ವ್ಯಾನ್ಸ್ ಭಾರತ-ಯುಎಸ್ ಸಂಬಂಧದ ಬಗ್ಗೆ ಭಾಷಣ ಮಾಡುವ ಮೊದಲು ಅವರು ಅಂಬರ್ ಕೋಟೆಗೆ ಭೇಟಿ ನೀಡಿದ್ದರು. ಜೈಪುರಕ್ಕೆ ಮರಳುವ ಮೊದಲು ಅವರು ಆಗ್ರಾದ ತಾಜ್ ಮಹಲ್ ಗೆ ಭೇಟಿ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜಧಾನಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗುವ ಮೊದಲು ವ್ಯಾನ್ಸ್ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ತಮ್ಮ ಭಾರತ ಪ್ರವಾಸವನ್ನು ಪ್ರಾರಂಭಿಸಿದ್ದರು. ಇದೀಗ ತಮ್ಮ ಮೂರು ದಿನಗಳ ಭಾರತ ಪ್ರವಾಸದಿಂದ ಅವರು ಅಮೆರಿಕಕ್ಕೆ ವಾಪಸ್ಸಾಗಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-08-2025)
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ