ವಾಷಿಂಗ್ಟನ್,ಅ. 30 (ಪಿಟಿಐ) ಭಾರತ-ಚೀನಾ ಗಡಿಯಲ್ಲಿ ಯಾವುದೇ ರೀತಿಯ ಉದ್ವಿಗ್ನತೆಯನ್ನು ಕಡಿಮೆ ಮಾಡುವುದನ್ನು ನಾವು ಸ್ವಾಗತಿಸುತ್ತೇವೆ ಎಂದು ಅಮೆರಿಕ ಹೇಳಿದೆ ಮತ್ತು ಈ ನಿಟ್ಟಿನಲ್ಲಿ ಹೊಸ ದೆಹಲಿಯಿಂದ ತನಗೆ ಮಾಹಿತಿ ನೀಡಲಾಗಿದೆ ಎಂದು ಅದು ತಿಳಿಸಿದೆ.
ನಾವು (ಭಾರತ ಮತ್ತು ಚೀನಾ ನಡುವಿನ) ಬೆಳವಣಿಗೆಗಳನ್ನು ನಿಕಟವಾಗಿ ಅನುಸರಿಸುತ್ತಿದ್ದೇವೆ. ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಘರ್ಷಣೆ ಬಿಂದುಗಳಿಂದ ಪಡೆಗಳನ್ನು ಹಿಂತೆಗೆದುಕೊಳ್ಳಲು ಎರಡೂ ದೇಶಗಳು ಆರಂಭಿಕ ಕ್ರಮಗಳನ್ನು ತೆಗೆದುಕೊಂಡಿವೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ ಎಂದು ಅಮೆರಿಕ ಹೇಳಿದೆ.
ಗಡಿಯಲ್ಲಿ ಯಾವುದೇ ಉದ್ವಿಗ್ನತೆ ಕಡಿಮೆಯಾಗುವುದನ್ನು ನಾವು ಸ್ವಾಗತಿಸುತ್ತೇವೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ವ್ಯಾಥ್ಯೂ ಮಿಲ್ಲರ್ ತಮ ದೈನಂದಿನ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಮಿಲ್ಲರ್, ಇದರಲ್ಲಿ ಯುಎಸ್ ಯಾವುದೇ ಪಾತ್ರವನ್ನು ವಹಿಸಿಲ್ಲ ಎಂದು ಹೇಳಿದರು.ನಾವು ನಮ ಭಾರತೀಯ ಪಾಲುದಾರರೊಂದಿಗೆ ಮಾತನಾಡಿದ್ದೇವೆ ಮತ್ತು ಅದರ ಬಗ್ಗೆ ತಿಳಿಸಿದ್ದೇವೆ, ಆದರೆ ಈ ನಿರ್ಣಯದಲ್ಲಿ ನಾವು ಯಾವುದೇ ಪಾತ್ರವನ್ನು ವಹಿಸಿಲ್ಲ ಎಂದು ಮಿಲ್ಲರ್ ಹೇಳಿದರು.