ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಏರಿಕೆಯಾಗಿಲ್ಲ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಜೂ.16-ರಾಜ್ಯದಲ್ಲಿ ನೈರುತ್ಯ ಮುಂಗಾರು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಸಂಗ್ರಹ ಮಾತ್ರ ಶೇ.21ರಷ್ಟಿದೆ. ನಾರಾಯಣಪುರ ಹಾಗೂ ವಾಣಿವಿಲಾಸ ಸಾಗರ ಜಲಾಶಯ ಹೊರತುಪಡಿಸಿದರೆ, ಉಳಿದ ಯಾವ ಜಲಾಶಯದಲ್ಲೂ ಶೇ.50ಕ್ಕಿಂತ ಹೆಚ್ಚು ನೀರಿಲ್ಲ. ಮೇ ತಿಂಗಳಲ್ಲಿ ಪೂರ್ವ ಮುಂಗಾರು ಮಳೆ ಹಾಗೂ ಕಳೆದ ಎರಡು ವಾರಗಳಿಂದ ಮುಂಗಾರು ಮಳೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಾಗಿದೆ. ಇದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಪರಿಹಾರ ದೊರೆತಂತಾಗಿದೆ. ಆದರೆ, ಜಲ ವಿದ್ಯುತ್‌ ಉತ್ಪಾದಿಸುವ … Continue reading ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಏರಿಕೆಯಾಗಿಲ್ಲ ಜಲಾಶಯಗಳ ನೀರಿನ ಮಟ್ಟ