ಲಖನೌ,ಡಿ.28-ಮನೆಯೊಂದಕ್ಕೆ ಬೆಂಕಿ ಬಿದ್ದು ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿರುವ ಘಟನೆ ಶಹಪುರ್ ಗ್ರಾಮದಲ್ಲಿ ನಡೆದಿದೆ. ಪತಿ, ಪತ್ನಿ ಮೂವರು ಮಕ್ಕಳು ಸಾವನ್ನಪ್ಪಿದ್ದು, ಒಲೆಯೊಂದರಿಂದ ಹಾರಿದ ಕಿಡಿಯಿಂದ ಈ ಬೆಂಕಿ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳೀಯರು ಬೆಂಕಿ ಆರಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ, ವೈದ್ಯಕೀಯ ಮತ್ತು ಪರಿಹಾರ ಸಿಬ್ಬಂದಿಯ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯಿಂದ ತೀವ್ರ ಗಾಯಗೊಂಡಿದ್ದವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರೂ ಐವರೂ ಉಸಿರು ಚಲ್ಲಿದ್ದಾರೆ.
ಜಮ್ಮು-ಶ್ರೀನಗರ ಹೆದ್ಧಾರಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಪೊಲೀಸರು
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಅರುಣ್ ಕುಮಾರ್ ಕೂಡ ಬೇಟಿ ನೀಡಿ ಸರ್ಕಾರವು ಸಂತ್ರಸ್ತರ ಕುಟುಂಬಕ್ಕೆ 4 ಲಕ್ಷ ಬಿಡುಗಡೆ ಮಾಡಿದರು.
ಮೃತರ ಪಾರ್ಥಿವ ಶರೀರಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.ಘಟನೆ ಬಗ್ಗೆ ಗ್ರಾಮಸ್ಥರು ಅತಂಕ ವ್ಯಕ್ತಪಡಿದ್ದಾರೆ. ಕೊಪಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ದರಾಮಯ್ಯ ವಿರುದ್ಧದ ಪ್ರಕರಣ : ಎಸ್ಪಿಗೆ ಲೋಕಾಯುಕ್ತ ನೋಟಿಸ್
Uttar Pradesh, House, fire, kills, 5 members, family,