ಮೂರು ತಿಂಗಳೊಳಗೆ ಬಿಬಿಎಂಪಿಗೆ ಚುನಾವಣೆ : ಸಚಿವ ಸೋಮಣ್ಣ

Social Share

ಬೆಂಗಳೂರು,ಜ.21-ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಇಂದಿಲ್ಲಿ ತಿಳಿಸಿದರು.ಗೋವಿಂದರಾಜನಗರದ ಜ್ಞಾನಸೌಧ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಮಪೂಜ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಮೂರನೇ ಪುಣ್ಯಸ್ಮರಣೋತ್ಸವ ಹಾಗೂ ದಾಸೋಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಒಂದು ವರ್ಷ ತಡವಾಗಿರುವ ಬಿಬಿಎಂಪಿಗೆ ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದರು.
ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಮತ್ತು ನನ್ನ ನಡುವೆ 45 ವರ್ಷಗಳ ಕಾಲ ತಂದೆ-ಮಗನ ಸಂಬಂಧ ಇತ್ತು. ನಾನು ರಾಜಕೀಯ ಕ್ಷೇತ್ರದಲ್ಲಿ ಬೆಳೆಯಲು ಶ್ರೀಗಳು ಹಾಗೂ ಆದಿಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನವಿತ್ತು ಎಂದರು.
ಅಂತಹ ಮಹಾನ್ ಶ್ರೀಗಳ ಮಾರ್ಗದರ್ಶನದಲ್ಲಿ ಸಾಗಿದರೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಜೀವನ ಸಾಗಿಸಬಹುದು ಎಂದು ಸೋಮಣ್ಣ ಹೇಳಿದರು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅರುಂಧತಿನಗರದಲ್ಲಿ ಕನಕಭವನ ನಿರ್ಮಾಣ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ತರಬೇತಿ, ಮಾನಸನಗರದಲ್ಲಿ 295 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾಸಿರಿ ಯೋಜನೆಯಡಿ 2.48ಲಕ್ಷ ವಿದ್ಯಾರ್ಥಿಗಳಿಗೆ 2ಸಾವಿರ ರೂ.ಗಳ ಸಹಾಯ ಧನ ಹಾಗೂ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 6ಸಾವಿರ ಕೋಟಿ ರೂ.ಗಳ ಅನುದಾನ ನೀಡಿದ್ದಾರೆ ಎಂದು ಸೋಮಣ್ಣ ಸ್ಮರಿಸಿದರು.

Articles You Might Like

Share This Article