ನೆರೆ ಪೀಡಿತ ಚಾಮರಾಜನಗರಕ್ಕೆ ಸಚಿವ ಸೋಮಣ್ಣ ಭೇಟಿ

Spread the love

ಕೊಳ್ಳೇಗಾಲ,ಆ.23- ತಾಲ್ಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ನೂತನ ಸಚಿವ ಹಾಗೂ ಚಾಮರಾಜನಗರ ಪ್ರವಾಹ ಉಸ್ತುವಾರಿ ವಿ.ಸೋಮಣ್ಣ ಭೇಟಿ ನೀಡಿ ಸಂತ್ರಸ್ಥರಿಗೆ ಕೂಡಲೇ ಪರಿಹಾರ ನೀಡುವ ಭರವಶೆ ನೀಡಿದರು. ಹಳೇ ಹಂಪಾಪುರ, ದಾಸನಪುರ, ಹಳೇ ಅಣಗಳ್ಳಿ, ಮುಳ್ಳೂರು, ಹರಳೆ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು ಅಧಿಕಾರಿಗಳಿಂದ ಪ್ರವಾಹದಿಂದ ಹಾನಿಗೊಳಗಾಗಿರು ಆಸ್ತಿ-ಪಾಸ್ತಿಗಳ ವಿವರ ಪಡೆದು ಕೊಂಡರು. ಕುಸಿದಿರುವ ಮನೆಗಳು ಹಾನಿಗೊಳಗಾಗಿರುವ ಮನೆಗಳು, ನಾಶವಾಗಿರುವ ರೈತರು ಬೆಳೆದ ಬೆಳೆಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು. ಈಗಾಗಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿರುವಂತೆ ಮನೆ ಕಳೆದು ಕೊಂಡಯರಿಗೆ 6 ತಿಂಗಳ ಒಳಗಾಗಿ 5 ಲಕ್ಷ ರೂ.ವೆಚ್ಚದಲ್ಲಿ ಮನೆ ನಿಮರ್ಿ9ಸಿ ಕೊಡಲಾಗುವುದು. ಭಾಗಶಃ ಹಾನಿಯಾಗಿರುವ ಮನೆಗಳಿಗೆ ಒಂದು ಲಕ್ಷ ಪರಿಹಾರ ನೀಡಲಾಗುವುದು ಎಂದರು.

ಬೆಳೆ ಹಾನಿಯ ಬಗ್ಗೆ ಅಧಿಕಾರಿಗಳ ತಂಡ ಸರ್ವೆ ಮಾಡಿ ವರದಿ ನೀಡಿದ ನಂತರ ಪರಿಹಾರ ವಿತರಿಸಲಾಗುವುದು. ಇದು ತಾತ್ಕಾಲಿಕ ಪರಿಹಾರವಾಗಿದೆ. ನದಿ ತೀರದ ಗ್ರಾಮಗಳು ಪ್ರತಿ ವರ್ಷ ನೆರೆ ಹಾವಳಿಗೆ ತುತ್ತಾಗುತ್ತಿದ್ದು, ಇದರಿಂದ ಈ ಗ್ರಾಮಗಳ ಜನ ಪ್ರತಿ ವರ್ಷ ಪ್ರವಾಹ ಭೀತಿ ಎದುರಿಸಬೇಕಿದೆ. ಅದಕ್ಕಾಗಿ ಶಾಸ್ವತ ಪರಿಹಾರ ಕಂಡುಕೊಳ್ಳಲು ತಡೆಗೋಡೆ ನಿರ್ಮಿಸಲು ಅಧಿಕಾರಿಗಳಿಗೆ ಸರ್ವೆ ಮಾಡಿ ವರದಿ ನೀಡುವಂತೆ ಸೂಚಿಸಿದರು.

ಈ ವೇಳೆ ಶಾಸಕರಾದ ನಿರಂಜನ್ ಕುಮಾರ್, ಎನ್.ಮಹೇಶ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾ ವಿಕ್ಷಕರಾದ ರಾಜೇಂದ್ರ ಕುಮಾರ್ ಕಠಾರಿಯ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಡಿ ಆನಂದ್ ಕುಮಾರ್, ಅಪರ ಜಿಲ್ಲಾಧಿಕಾರಿ ಆನಂದ್, ಉಪ ವಿಭಾಗಾಧಿಕಾರಿ ನಿಖಿತ ಚಿನ್ನಸ್ವಾಮಿ, ತಹಶೀಲ್ದಾರ್ ಕುನಾಲ, ನೋಡಲ್ ಅಧಿಕಾರಿಗಳಾದ ಬಸವರಾಜು, ಹೊನ್ನೇಗೌಡ, ರಾಜೇಂದ್ರ ಪ್ರಸಾದ್, ಬಸವರಾಜು, ತಾ.ಪಂ. ಇಒ ಚಂದ್ರ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Facebook Comments