ಹಂತಹಂತವಾಗಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಬೋಸರಾಜು

ಬೆಂಗಳೂರು,ಜು.18- ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ವಿಧಾನಪರಿಷತ್‌ ಸಭಾನಾಯಕ ಬೋಸರಾಜು ಹೇಳಿದ್ದಾರೆ.ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಶ್ನೆ ಮಾಡಿದ್ದರು. ಸಿಎಂ ಪರವಾಗಿ ಉತ್ತರಿಸಿದ ಬೋಸರಾಜು, ಸರ್ಕಾರ ಹಂತಹಂತವಾಗಿ ಆರ್ಥಿಕ ಇಲಾಖೆ ಒಪ್ಪಿಗೆ ಪಡೆದು ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಏಕಕಾಲದಲ್ಲಿ ಎಲ್ಲಾ ಹುದ್ದೆಗಳನ್ನೂ ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌‍ಸಿ)ದ … Continue reading ಹಂತಹಂತವಾಗಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಬೋಸರಾಜು