ಬೆಂಗಳೂರು, ಫೆ.21- ಶಿವಮೊಗ್ಗದಲ್ಲಿ ಕೊಲೆಯಾದ ಹಿಂದೂಪರ ಸಂಘಟನೆ ಯುವಕನ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಕಲ್ಲು ತೂರಾಟ, ಹಿಂಸಾಚಾರ ನಡೆದಿದ್ದು, ಪರಿಸ್ಥಿತಿ ಕೈ ಮೀರಿದ್ದರಿಂದ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಮೆರವಣಿಗೆ ಸಂದರ್ಭದಲ್ಲಿ ಪೊಲೀಸರ ಎದುರಿಗೇ ಉದ್ರಿಕ್ತರು ಅಂಗಡಿ-ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು.
ಮೆರವಣಿಗೆ ವೇಳೆ ಒಂದು ಗುಂಪಿನಿಂದ ಕಲ್ಲು ತೂರಾಟ ನಡೆದಿದೆ. ರವಿವರ್ಮ ಬೀದಿ, ಸಿದ್ದಯ್ಯ ರಸ್ತೆ ಮುಂತಾದ ಕಡೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ ಪರಿಣಾಮ ಇಬ್ಬರು ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಉದ್ರಿಕ್ತರು ಅಂಗಡಿ-ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಹರ್ಷ ಅವರ ಅಂತ್ಯ ಸಂಸ್ಕಾರ ಬಿಎಸ್ ರಸ್ತೆಯ ರೋಟರಿ ಚಿತಾಗಾರದಲ್ಲಿ ನಡೆಯಲಿದೆ.
