Friday, October 18, 2024
Homeಇದೀಗ ಬಂದ ಸುದ್ದಿಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್‌ ಮನೆ, ಕಚೇರಿ ಸೇರಿ 18 ಕಡೆ...

ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್‌ ಮನೆ, ಕಚೇರಿ ಸೇರಿ 18 ಕಡೆ ಇಡಿ ದಾಳಿ

ಬೆಂಗಳೂರು,ಜು.10– ರಾಜ್ಯ ಸರ್ಕಾರಕ್ಕೆ ಭಾರೀ ಕಂಠಕವಾಗಿ ಪರಿಣಮಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕ ಬಸನಗೌಡ ದದ್ದಲ್‌, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳ ಮನೆ, ಕಚೇರಿ, ಬ್ಯಾಂಕ್‌ ಸೇರಿದಂತೆ ಒಟ್ಟು 18 ಕಡೆ ಏಕಕಾಲಕ್ಕೆ ಜಾರಿ ನಿದೇರ್ಶನಾಲಯ ( ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿಶೇಷವೆಂದರೆ ನಿನ್ನೆಯಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ವಾಲೀಕಿ ನಿಗಮ ಮಂಡಳಿ ಅಧ್ಯಕ್ಷ ಬಸನಗೌಡ ದದ್ದಲ್‌, ಎಸ್‌‍ಐಟಿ ಮುಂದೆ ವಿಚಾರಣೆಗೆ ಹಾಜರಾದ ಮರುದಿನವೇ ಇಡಿ ದಾಳಿ ನಡೆಸಿದೆ.ಮೂಲಗಳ ಪ್ರಕಾರ ಈಗಾಗಲೇ ಬಿ.ನಾಗೇಂದ್ರ ಅವರನ್ನು ಇಡಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.


ಬುಧವಾರ ಬೆಳಗ್ಗೆ ಒಟ್ಟು 5 ತಂಡ ಪ್ರತ್ಯೇಕವಾಗಿ ಬೆಂಗಳೂರು, ರಾಯಚೂರು, ಬಳ್ಳಾರಿ, ಹೈದರಾಬಾದ್‌ ಸೇರಿದಂತೆ ಒಟ್ಟು 18 ಕಡೆ ದಾಳಿ ನಡೆಸಿ ಪ್ರಕರಣ ಸಂಬಂಧ ಮಹತ್ವದ ದಾಖಲೆಗಳು, ಹಣದ ವಹಿವಾಟಿನ ಕಾಗದ ಪತ್ರಗಳು, ಮೊಬೈಲ್‌ ಸೇರಿದಂತೆ ಮತ್ತಿತರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ದಾಳಿಗೂ ಮುನ್ನ ಇಡಿ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸಣ್ಣ ಸುಳಿವನ್ನು ಕೂಡ ನೀಡಿರಲಿಲ್ಲ. ಸಿಎಸ್‌‍ಎಫ್‌ ಭದ್ರತೆಯೊಂದಿಗೆ ಎಲ್ಲಾ ಕಡೆ ದಾಳಿ ನಡೆಸಲಾಗಿದೆ.ಮಾಜಿ ಸಚಿವ ನಾಗೇಂದ್ರ ಅವರ ಡಾಲರ್‌ರ‍ಸ ಕಾಲೋನಿಯಲ್ಲಿರುವ ರಾಮ್ಕಿ ಉತ್ಸವ್‌ ಫ್ಲಾಟ್‌ ಜೊತೆಗೆ ಅವರ ಆಸ್ತಿಗಳಿರುವ ಬಿಇಎಲ್‌ ರೋಡ್‌, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಲಾಗಿದೆ.

ಇಡಿ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ನಾಗೇಂದ್ರ ಮನೆಯಲ್ಲೇ ಇದ್ದರು. ಈ ವೇಳೆ ಕುಟುಂಬದ ಸಮುಖದಲ್ಲೇ ದಾಖಲೆಗಳನ್ನು ಪರಿಶೀಲಿಸಿ ಕೆಲವನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಬಳ್ಳಾರಿಯ ಮನೆಯ ಮೇಲೂ ದಾಳಿ ನಡೆಸಲಾಗಿದೆ.

ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ರಾಮ್‌ರಹೀಮ್‌ ಕಾಲೋನಿಯ ಮನೆ ಮೇಲೆ ದಾಳಿ ಮಾಡಲಾಗಿದೆ. ಅದೇ ರೀತಿ ಬೆಂಗಳೂರಿನ ಯಲಹಂಕ, ಕೋರಮಂಗಲ, ಶಾಸಕರ ಭವನ, ವಾಲೀಕಿ ಮುಖ್ಯ ಕಚೇರಿ, ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳ ಮೇಲೆ ದಾಳಿ: ಬಹುಕೋಟಿ ಹಗರಣದ ಬಹುಕೋಟಿ ಹಗರಣ ಹೊರಬಂದ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳಿಗೂ ಇಡಿ ಬಿಸಿ ಮುಟ್ಟಿಸಿದೆ. ಎಂಜಿರಸ್ತೆಯ ಮುಖ್ಯ ಕಚೇರಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ.

ಮುಖ್ಯವಾಗಿ ಯ್ಯೂನಿಯನ್‌ ಬ್ಯಾಂಕ್‌ ಬ್ರಾಂಚ್‌ ಹೆಡ್‌ ಸುಚಿಸಿತಾ, ಕ್ರೆಡಿಟ್‌ ಆಫೀಸರ್‌ ಕೃಷ್ಣಮೂರ್ತಿ, ಬ್ರಾಂಚ್‌ ಹೆಡ್‌ ದೀಪಾ ಮುಂತಾದವರ ಮನೆಗಳ ಮೇಲೂ ದಾಳಿ ನಡೆಸಿ, ವಿಚಾರಣೆ ನಡೆಸಲಾಗಿದೆ. ವಾಲೀಕಿ ನಿಗಮದ ಎಂಡಿ ಜೆ.ಜೆ.ಪದನಾಭ್‌‍, ಲೆಕ್ಕಪರಿಶೋಧಕ ಪರಶುರಾಮ್‌ ಮನೆ ಮೇಲೂ ದಾಳಿ ನಡೆಸಲಾಗಿದೆ.

ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್‌‍, ಸತ್ಯನಾರಾಯಣ್‌ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ಮಾಡಲಾಗಿದೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಿ.ನಾಗೇಂದ್ರ ಮನೆ ಮೇಲೂ ಬೆಳಗ್ಗೆ 3ರಿಂದ 4 ಅಧಿಕಾರಿಗಳಿದ್ದ ತಂಡ ದಾಳಿ ಮಾಡಿದೆ.
ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಬ್ರಾಂಚ್‌ ಮುಖ್ಯಸ್ಥೆ ಸುಚಿಸಿತಾ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ಆದರೆ ಅವರು ಮನೆಯಲ್ಲಿ ಇಲ್ಲದ ಕಾರಣ ಮನೆಗೆ ನೋಟಿಸ್‌‍ ಅಂಟಿಸಲಾಗಿದೆ.

ಏನಿದು ಹಗರಣ: ವಾಲೀಕಿ ನಿಗಮದ ಹಗರಣದಲ್ಲಿ 183 ಕೋಟಿ ರೂ. ಅವ್ಯವಹಾರ ನಡೆದಿತ್ತು. ಇದರ ವ್ಯಾಪ್ತಿ ಕೆಳಹಂತದ ಅಧಿಕಾರಿಗಳಿಂದ ಹಿಡಿದು ಮೇಲಿನವರೆಗೂ ವ್ಯಾಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆತಹತ್ಯೆ ಮಾಡಿಕೊಂಡ ಚಂದ್ರಶೇಖರ್‌ ಡೆತ್‌ನೋಟ್‌ನಲ್ಲಿಯೂ ಸಚಿವರ ಬಗ್ಗೆ ಉಲ್ಲೇಖ ಇತ್ತು. ಬ್ಯಾಂಕ್‌ಗಳಲ್ಲಿ ಬಹುಕೋಟಿ ಹಣ ಅಕ್ರಮ ನಡೆದಾಗ ಈ ವಿಚಾರದಲ್ಲಿ ರಾಜ್ಯ ಯಾವುದೇ ಒಪ್ಪಿಗೆ ನೀಡದೆಯೂ ಸಿಬಿಐ ಹಾಗೂ ಇಡಿ ಇದರಲ್ಲಿ ಮಧ್ಯೆ ಪ್ರವೇಶಿಸಿ ತನಿಖೆ ಕೈಗೆತ್ತಿಕೊಳ್ಳಬಹುದಾಗಿದೆ. ಎರಡೂ ಸಂಸ್ಥೆಗಳು ಈ ಪ್ರಕರಣದ ಬಗ್ಗೆ ಆಸಕ್ತಿ ವಹಿಸಿವೆ ಎಂದು ಗೊತ್ತಾಗಿತ್ತು.

ಒಟ್ಟು 94 ಕೋಟಿ 73 ಲಕ್ಷ ಅವ್‌ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌‍ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ ನಿವಾಸದಲ್ಲಿ ಆತಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು.

ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌‍, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್‌ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಂಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್‌್ಸ ಠಾಣೆಯಲ್ಲಿ ಎಫ್‌‍ಐಆರ್‌ ದಾಖಲಾಗಿತ್ತು.

ನೂರಾರು ಕೋಟಿ ಆಕ್ರಮ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿದೆ.

ಬ್ಯಾಂಕ್‌ನವರು ಫೆ.26ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ-ಹಂತವಾಗಿ 187.33 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಮಾ.4ರಂದು 25 ಕೋಟಿ ರೂ., ಮಾ.6ರಂದು 25 ಕೋಟಿ, ಮಾ.21ರಂದು 44 ಕೋಟಿ , ಮಾ.22ರಂದು 43.33 ಕೋಟಿ ಹಾಗೂ ಮೇ 21ರಂದು 50 ಕೋಟಿ ರೂ. ವರ್ಗಾವಣೆಯಾಗಿದೆ.

RELATED ARTICLES

Latest News