Sunday, September 8, 2024
Homeರಾಜ್ಯವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅರೆಸ್ಟ್

ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅರೆಸ್ಟ್

ಬೆಂಗಳೂರು, ಜು.12 – ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಳಿಗ್ಗೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡಿ ನಂತರ ಬಂಧಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಳಿಗ್ಗೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು.ನಾಗೇಂದ್ರ ಅವರನ್ನು ವಿಚಾರಣೆಗಾಗಿ ಇಡಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ಆಗಮಿಸಿ ನಂತರ ಕಚೇರಿಗೆ ಕರೆದೊಯ್ಯದಿದ್ದರು.

ಹಗರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರು ಜೂನ್‌ 6 ರಂದು ರಾಜೀನಾಮೆ ಸಲ್ಲಿಸಿದರು.

ನನ್ನ ಮನೆಯಿಂದ ಕರೆತರಲಾಗುತ್ತಿದೆ…ನನಗೇನೂ ಗೊತ್ತಿಲ್ಲ ಎಂದು ಇಡಿ ಕಚೇರಿಗೆ ಕರೆದೊಯ್ಯುತ್ತಿದ್ದಂತೆ ನಾಗೇಂದ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ.ಹಲವು ಸ್ಥಳಗಳಲ್ಲಿ ಇಡಿ ಕಳೆದ ಎರಡು ದಿನಗಳಿಂದ ಶೋಧ ನಡೆಸಿ ಪ್ರಸ್ತುತ ಶಾಕರನ್ನು ವಶಕ್ಕೆ ಪಡೆದಿರುವುದು ಸಂಚಲನ ಸೃಷ್ಠಿಸಿದೆ.

ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಸುಮಾರು 20 ಸ್ಥಳಗಳಲ್ಲಿ ಮನಿ ಲಾಂಡರಿಂಗ್‌ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಿದ ಪ್ರಕರಣದ ಭಾಗವಾಗಿ ಇವರನ್ನು ವಶಕ್ಕೆ ಪಡಯಲಾಗಿದೆ ಎಂದು ಮೂಲಗಳು ತಿಳಿಸಿವೆ.ಇಲಾಖೆಯ ಅಧೀಕ್ಷಕ ಚಂದ್ರಶೇಖರನ್‌ ಕಳೆದ ಮೇ 26 ರಂದು ಆತಹತ್ಯೆ ಮಾಡಿಕೊಂಡ ನಂತರ 187 ಕೋಟಿ ಅವ್ಯವಹಾರ ಬೆಳಕಿಗೆ ಬಂದಿತ್ತು.

ನಿಗಮಕ್ಕೆ ಸೇರಿದ 187 ಕೋಟಿ ರೂ.ಗಳನ್ನು ಬ್ಯಾಂಕ್‌ ಖಾತೆಯಿಂದ ಅನಧಿಕೃತವಾಗಿ ಪ್ರಸಿದ್ಧ ಐಟಿ ಕಂಪನಿಗಳು ಮತ್ತು ಹೈದರಾಬಾದ್‌ ಮೂಲದ ಸಹಕಾರಿ ಬ್ಯಾಂಕ್‌ಗೆ ಸೇರಿದ ವಿವಿಧ ಖಾತೆಗಳಿಗೆ 88.62 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ.

ಅಮಾನತುಗೊಂಡಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ ಜಿ ಪದನಾಭ್‌,ಪರಶುರಾಮ್‌ ಜಿ ದುರುಗಣ್ಣವರ್‌ ಮತ್ತು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಸುಚಿಸಿತಾ ರಾವಲ್‌ ಅವರ ಹೆಸರನ್ನು ಟಿಪ್ಪಣಿಯಲ್ಲಿ ಹೆಸರಿಸಿದ್ದಾರೆ, ಆದರೆ ಸಚಿವರು ಹಣವನ್ನು ವರ್ಗಾಯಿಸಲು ಮೌಖಿಕ ಆದೇಶವನ್ನು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES

Latest News