Saturday, July 27, 2024
Homeರಾಜ್ಯವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಹೈದರಾಬಾದ್‌ನ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಹಣ ಜಪ್ತಿ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಹೈದರಾಬಾದ್‌ನ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಹಣ ಜಪ್ತಿ

ಬೆಂಗಳೂರು, ಜೂ.6- ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಹಗರಣದ ಪ್ರಕರಣ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಹಣ ಜಪ್ತಿ ಮಾಡಿದೆ.

ಬಂಧಿತ ಆರೋಪಿ ಸತ್ಯನಾರಾಯಣ್‌ ಒಡೆತನದ ಸಹಕಾರಿ ಬ್ಯಾಂಕ್‌ ಇದಾಗಿದ್ದು, ಇದೇ ಬ್ಯಾಂಕ್‌ ಖಾತೆಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು.

ವರ್ಗಾವಣೆಯಾಗಿದ್ದ 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿತ್ತು. ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ನಿಗಮದಿಂದ ಹೈದರಾಬಾದ್‌ನಲ್ಲಿರುವ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್‌ಗೆ ಒಟ್ಟು 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಈಗಾಗಲೇ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್‌ ಮಾಲೀಕ ಸತ್ಯನಾರಾಯಣ್‌ ಅವರನ್ನು ಬಂಧಿಸಲಾಗಿದೆ.

ಸಹಕಾರಿ ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಮಾಡಲಾಗಿದೆ. ಉಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್‌ಐಟಿ ತನಿಖೆ ಮುಂದುವರಿಸಿದೆ.

ಪ್ರಕರಣ ಸಂಬಂಧ ಐವರನ್ನು ಎಸ್‌ಐಟಿ ಬಂಧಿಸಿದೆ. ಪರಶುರಾಮ್‌, ನೆಕ್ಕುಂಟಿ ನಾಗರಾಜ್‌, ನಾಗೇಶ್ವರ ರಾವ್‌, ಪದ್ಮನಾಭ, ಸತ್ಯನಾರಾಯಣ ಬಂಧಿತರು. ಐವರನ್ನು ಕಸ್ಟಡಿಗೆ ಪಡೆದು ಎಸ್‌ಐಟಿ ವಿಚಾರಣೆ ನಡೆಸುತ್ತಿದೆ.

RELATED ARTICLES

Latest News