Sunday, November 10, 2024
Homeಬೆಂಗಳೂರುಶಾಲಾವಾಹನ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಶಾಲಾವಾಹನ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

Attack on School Bus Driver

ಬೆಂಗಳೂರು, ಸೆ. 17 –ಶಾಲಾ ವಾಹನವನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ, ನಿಂದಿಸಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಹೆಬ್ಬಗೋಡಿ ಪೊಲೀಸರು ಬಲೆ ಬೀಸಿದ್ದಾರೆ.

ನಿನ್ನೆ ಮಧ್ಯಾಹ್ನ 3 ಗಂಟೆ ಸಂದರ್ಭದಲ್ಲಿ ಹುಲಿಮಂಗಲ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವಾಹನದ ಹಿಂದೆ ಸ್ಕಾರ್ಫಿಯೋ ವಾಹನ ಬರುತ್ತಿದ್ದು, ಮುಂದೆ ಹೋಗುವುದಕ್ಕೆ ರಸ್ತೆ ಬಿಡಲಿಲ್ಲವೆಂದು ಅದರಲ್ಲಿದ್ದವರು ಬಸ್‌‍ ಅಡ್ಡಗಟ್ಟಿ ಚಾಲಕನ ಜೊತೆ ಜಗಳ ತೆಗೆದು ಹಲ್ಲೆ ಮಾಡಿ ನಿಂದಿಸಿ ವಾಹನದ ಕಿಟಕಿ ಗಾಜುಗಳನ್ನು ಹೊಡೆದು ದಾಂಧಲೆ ನಡೆಸಿ ಪರಾರಿಯಾಗಿದ್ದಾರೆ.

ಇದರಿಂದ ಶಾಲಾ ವಾಹನದಲ್ಲಿದ್ದ ಮಕ್ಕಳು ಗಾಬರಿಗೊಂಡು ತಮ ಪೋಷಕರಿಗೆ ತಿಳಿಸಿದ್ದರು. ನಂತರ ಇಡೀ ಘಟನೆ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದ್ದು, ಹೆಬ್ಬಗೋಡಿ ಠಾಣೆ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡು ಸ್ಕಾರ್ಫಿಯೋ ವಾಹನವನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

RELATED ARTICLES

Latest News