ತುಮಕೂರು, ಆ.16- ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಹರಿದ ಬೆನ್ನಲ್ಲೇ ತುಮಕೂರು ನಗರದಲ್ಲಿಯೂ ವೀರ ಸಾವರ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿರುವುದು ಆತಂಕಕ್ಕೆ ಕಾರಣವಾಗಿದೆ.
ನಗರದ ಎಂಪ್ರೆಸ್ ಶಾಲೆ ಮುಂಭಾಗ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಳವಡಿಸಲಾಗಿದ್ದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ತಡರಾತ್ರಿ ಹರಿದುಹಾಕಿದ್ದು, ನಗರದಲ್ಲಿ ಆತಂಕ ಮನೆ ಮಾಡಿದೆ.
ವೀರ ಸಾವರ್ಕರ್ ಭಾವಚಿತ್ರ ಹರಿದಿರುವ ಬೆನ್ನಲ್ಲೇ ನಗರದಲ್ಲಿ ಶಾಂತಿ ಕದಡದಂತೆ ಕ್ರಮ ಕೈಗೊಳ್ಳಲು ಪೊಲೀಸರು ಆಯಕಟ್ಟಿನ ಪ್ರದೇಶಗಳ ಮೇಲೆ ನಿಗಾ ವಹಿಸಿದ್ದಾರೆ.