ಬೆಂಗಳೂರು,ಜ.12- ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರು ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.
ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಯಾದಗಿರಿಗೆ ತೆರಳಲು ಅಗಮಿಸಿದ್ದ ಸ್ವಾಮೀಜಿ ಅವರು ಪ್ಲಾಟ್ಫಾರಂನಲ್ಲಿ ನಡೆದುಕೊಂಡು ಹೋಗುವಾಗ ದಿಢೀರ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಜೊತೆಯಲ್ಲಿದ್ದ ಭಕ್ತರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಸ್ವಾಮೀಜಿ ಇಹಲೋಕ ತ್ಯಜಿಸಿದರು ಎಂದು ತಿಳಿದುಬಂದಿದೆ.
ಅವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ. ಮುಂದಿನ ತಿಂಗಳು 25ನೇ ಪಟ್ಟಾಧಿಕಾರ ಮಹೋತ್ಸವ ನಿಮಿತ್ತ ಈ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲು ಬೆಂಗಳೂರಿಗೆ ಬಂದಿದ್ದರು ಎಂದು ತಿಳಿದುಬಂದಿದೆ.
ರಾಜ್ಯಪಾಲರ ಅಂಗಳ ತಲುಪಿದ ಸ್ಯಾಂಟ್ರೋ ರವಿ ಪ್ರಕರಣ
ಸ್ವಾಮೀಜಿ ಆರೋಗ್ಯವಾಗಿದ್ದರು. ವಾಪಸ್ ಯಾದಗಿರಿಗೆ ಹೋಗಬೇಕೆಂದು ರೈಲು ಟಿಕೆಟ್ ಬುಕ್ಮಾಡಿ ಕಳೆದ ರಾತ್ರಿ ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ರೈಲ್ವೆ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಸ್ವಾಮೀಜಿ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡು ಏಕಾಏಕಿ ಕುಸಿದು ಬಿದ್ದಿರು ಎಂದು ಭಕ್ತರು ಕಣ್ಣೀರು ಹಾಕಿದ್ದಾರೆ.
ಶಹಪೂರ ತಾಲೂಕಿನ ದೋರನಹಳ್ಳಿ ಹಿರೇಮಠವು ರಂಭಾಪುರಿ ಪೀಠದ ಶಾಖಾ ಮಠವಾಗಿದ್ದು, ಇತಿಹಾಸ ಮತ್ತು ಪರಂಪರೆ ಇದೆ.ಉತ್ತರ ಕರ್ನಾಟಕದಲ್ಲಿ ಅಪಾರ ಭಕ್ತರು ಇದ್ದಾರೆ. ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಸಂತಾಪ ವ್ಯಕ್ತಪಡಿಸಿದ್ದಾರೆ.
Veeramahanta, Shivacharya Swamiji, Lingaikya,