ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಯೋಜನೆಗೆ 21 ಕೋಟಿ ರೂ. ಮಂಜೂರು

Social Share

ಬೆಂಗಳೂರು, ನ.15- ಮಹಿಳೆಯರು ಮತ್ತು ಮಕ್ಕಳ ಸುರಕ್ಷತಾ ದೃಷ್ಟಿಯುಳ್ಳ ಸಾರ್ವಜನಿಕ ಸೇವಾ ವಾಹನಗಳಿಗೆ
ವಾಹನದ ಸ್ಥಳ ಟ್ರ್ಯಾಕಿಂಗ್ ಸಾಧನ (ವಿಎಲ್‍ಟಿಡಿ)ಮತ್ತು ತುರ್ತು ಪ್ಯಾನಿಕ್ ಬಟನ್ (ಇಪಿಬಿ) ಅಳವಡಿಕೆ ಯೋಜನೆಗೆ ರಾಜ್ಯ ಸರ್ಕಾರವು 21, 22,30, 649 ರೂ.ಗಳನ್ನು ಸರ್ಕಾರ ಮಂಜೂರು ಮಾಡಿದೆ.

ಈ ಯೋಜನೆಯ ಎರಡು ವರ್ಷಗಳ ನಿರ್ವಹಣಾ ವೆಚ್ಚ ಒಳಗೊಂಡಂತೆ ಮೇಲಿನ ಮೊತ್ತಕ್ಕೆ ಸಾರಿಗೆ ಇಲಾಖೆಯು ಆಡಳಿತಾತ್ಮಕ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40ರಷ್ಟು ವೆಚ್ಚ ಭರಿಸಲಿವೆ.

ಸಾರಿಗೆ ಇಲಾಖೆಯ ರಸ್ತೆ ಸುರಕ್ಷತೆ ಮತ್ತು ಸಾರಿಗೆ ಆಯುಕ್ತರು ಸಲ್ಲಿಸಿದ್ದ ಪ್ರಸ್ತಾವನೆಯ ಆಧಾರದ ಮೇಲೆ ಈ ಆದೇಶ ಹೊರಡಿಸಲಾಗಿದ್ದು, ಯೋಜನೆಗೆ 2035.90 ಲಕ್ಷ ರೂ.ಗಳು ವೆಚ್ಚವಾಗಲಿದ್ದು, ರಾಜ್ಯ ಸರ್ಕಾರದ ಪಾಲು 814.36 ಲಕ್ಷ ರೂ. ಆಗಿರುತ್ತದೆ. ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು 81 ಲಕ್ಷ ರೂ. ವೆಚ್ಚವಾಗಿದ್ದು, ಈ ಹಣವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚೀನಾದೊಂದಿಗೆ ಯಾವುದೇ ಶೀತಲ ಸಮರ ಇಲ್ಲ : ಬಿಡೆನ್

ಐದು ವರ್ಷಗಳ ನಿರ್ವಹಣೆಯನ್ನು ಅಳವಡಿಸಿಕೊಂಡು ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳ ಅನುಸಾರ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಲು ಸೂಚಿಸಿದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅನ್ವಯ ವಿಎಲ್‍ಟಿಡಿ ಮತ್ತು ಇಪಿಬಿ ಅಳವಡಿಸಬೇಕಾಗಿದ್ದು, ಎಂಪ್ಯಾನಲ್ಡ್ ವೆಂಡರ್ಸ್ ಮೂಲಕ ಈ ಸಾಧನ ಅಳವಡಿಸಲು ಆದೇಶಿಸಿದೆ.

ರಷ್ಯಾ-ಉಕ್ರೇನ್ ಸಂಘರ್ಷ ಕುರಿತು ಜಿ-20 ಸಮ್ಮೇಳನದಲ್ಲಿ ಮೋದಿ ಪ್ರಸ್ತಾಪ

ದೆಹಲಿಯಲ್ಲಿ ನಡೆದ ನಿರ್ಭಯ ಪ್ರಕರಣದ ನಂತರ ಪ್ರಯಾಣಿಕರ ಸುರಕ್ಷತೆ, ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಕಡ್ಡಾಯವಾಗಿ ವಿಎಲ್‍ಟಿಡಿ ಮತ್ತು ಇಪಿಬಿ ಅಳವಡಿಸಬೇಕಾಗಿದೆ.

Articles You Might Like

Share This Article