ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿ ಮಾಡಲ್ಲ : ಆರಗ ಜ್ಞಾನೇಂದ್ರ ಸ್ಪಷ್ಟನೆ

Social Share

ಬೆಂಗಳೂರು,ಸೆ.17- ನಗರದಲ್ಲಿ ಸ್ಥಗಿತ ಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ, ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನ ವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಭರಪೂರ ಕೊಡುಗೆ ಘೋಷಿಸಿದ ಸಿಎಂ ಬೊಮ್ಮಾಯಿ

ಸಾರ್ವಜನಿಕರಿಂದ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿ ಸಲಾಗಿತ್ತು ಎಂದು ನೆನಪಿಸಿದ ಸಚಿವರು ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

Articles You Might Like

Share This Article