ಮೈಸೂರು, ಅ. 8- ನನ್ನ ಜೀವಕ್ಕೆ ಅಪಾಯವಿದೆ ಎಂದು ಈ ಹಿಂದೆಯೇ ವೆಂಕಟೇಶ್ ಪೊಲೀಸರಿಗೆ ತಿಳಿಸಿದ್ದನೆಂಬ ಮಾಹಿತಿ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಹಲವು ದಿನಗಳಿಂದ ಓಡಾಡುತ್ತಿದ್ದ ಸ್ಥಳಗಳಲ್ಲಿ ನಿಂತು ನನ್ನ ಚಲನ-ವಲನಗಳನ್ನು ವೀಕ್ಷಿಸಿ ಕೊಲೆ ಮಾಡಲು ಹೊಂಚು ಹಾಕುತ್ತಿದ್ದರು ಎಂದು ವೆಂಕಟೇಶ್ ಪೋಲಿಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಲಿಲ್ಲ. ಹಾಗಾಗಿ ಹತ್ಯೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಹಿಂದೆ ಗುಂಪೊಂದು ವೆಂಕಟೇಶ್‌ನ ಮೇಲೆ ಎರಡು ಬಾರಿ ಹಲ್ಲೆ ನಡೆಸಿ ಕೊಲೆಗೆ ವಿಲ ಯತ್ನ ನಡೆಸಿತ್ತು. ಆದರೆ ಇದೀಗ ಮೂರನೇ ಬಾರಿಗೆ ಜನನಿಬಿಡ ಪ್ರದೇಶದಲ್ಲೇ ದಾಳಿ ಮಾಡಿ ಆತನನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ.
ಮೈಸೂರಿನ ದಸರಾ ವಸ್ತುಪ್ರದರ್ಶನ ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ವ್ಯಕ್ತಿಯನ್ನು ಹೊರಕ್ಕೆಳೆದು ಮಚ್ಚು-ಲಾಂಗ್ ಗಳಿಂದ ಕೊಚ್ಚಿ ಕೊಲೆಗೈದ ದೃಶ್ಯವನ್ನು ಅಲ್ಲಿದ್ದ ಸಾರ್ವಜನಿಕರು ೇಟೋ ತೆಗೆದು ಸಾಮಾಜಿಕ ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಆದರೆ ವೀಡಿಯೋ ಮಾಡಲು ಪ್ರಯತ್ನಿನಿಸಿದರಾದರೂ ದುಷ್ಕರ್ಮಿಗಳು ಅವರತ್ತ ಲಾಂಗ್ ತೋರಿದ್ದರಿಂದ ಹೆದರಿ, ರೆಕಾರ್ಡ್ ಮಾಡಲಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿ ರುವ ನಜರ್ ಬಾದ್ ಠಾಣೆ ಪೋಲಿಸರು ಸ್ಥಳ ಮಹಜರು ನಡೆಸಿ, ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಿದರು.
ಘಟನಾ ಸ್ಥಳದಲ್ಲಿ ಸಾರ್ವಜನಿಕರು ತೆಗೆದಿರುವ ೇಟೋ ಹಾಗೂ ಆ ಮಾರ್ಗದ ರಸ್ತೆಗಳಲ್ಲಿರುವ ಸಿಸಿ ಕ್ಯಾಮರಾಗಳ ಟೇಜ್‌ಗಳ ಸುಳಿವಿನ ಜಾಡು ಹಿಡಿದ ಪೋಲಿಸರು ದುಷ್ಕರ್ಮಿಗಳ ಪತ್ತೆಗೆ ಎರಡು ತನಿಖಾ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಆರೋಪಿಗಳ ಬಗ್ಗೆ ಕೆಲ ಮಾಹಿತಿಗಳನ್ನು ಕಲೆ ಹಾಕಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.