ಬೆಂಗಳೂರು,ಫೆ.22- ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ತಮ್ಮ ಎರಡನೇ ರಾಜಕೀಯ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಸಚಿವ ಮುನಿರತ್ನ, ಡಾ. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ. ಮೂಲಗಳ ಪ್ರಕಾರ ಅನಂತನಾಗ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಾವುದಾದರೊಂದು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.
ಆರತಕ್ಷತೆಗೆ ಮುನ್ನವೇ ನವವಿವಾಹಿತ ದಂಪತಿ ಸಾವು
ಈ ಹಿಂದೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ರ್ಸಧಿಸಿ ಅವರು ಪರಾಭವಗೊಂಡಿದ್ದರು. ಇದೀಗ ಅದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಅನಂತನಾಗ್ ಒಲವು ತೋರಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷ ಅವರಿಗೆ ಟಿಕೆಟ್ ನೀಡಲಿದೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಕೆ.ಆರ್.ಪುರಂ-ವೈಟ್‍ಫೀಲ್ಡ್ ಮೆಟ್ರೋ ರೈಲು ಸಂಚಾರಕ್ಕೆ ದಿನಗಣನೆ ಆರಂಭ
ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಶಾಸಕ, ಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿರುವ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ರ್ಪಧಿಸಿ ಸೋಲನುಭವಿಸಿದ್ದರು.
Veteran, actor, Anant Nag, joins, BJP,