Friday, September 20, 2024
Homeರಾಜ್ಯಹಿರಿಯ ಪತ್ರಕರ್ತ ವಸಂತ ನಾಡಿಗೇರ ಹೃದಯಾಘಾತದಿಂದ ನಿಧನ, ಗಣ್ಯರ ಸಂತಾಪ

ಹಿರಿಯ ಪತ್ರಕರ್ತ ವಸಂತ ನಾಡಿಗೇರ ಹೃದಯಾಘಾತದಿಂದ ನಿಧನ, ಗಣ್ಯರ ಸಂತಾಪ

Veteran journalist Vasant Nadiger dies of heart attack

ಬೆಂಗಳೂರು,ಸೆ.9- ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರಿನವರಾದ ನಾಡಿಗೇರ್‌ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.

ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಹಿಂದಿ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶಕರ್‌ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ.

ವಸಂತ್‌ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದರು. ಅವರು ಶೀರ್ಷಿಕೆಗಳ ಮೂಲಕವೇ ಮನೆಮಾತಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು.

╰┈➤ Please Follow EE SANJE Whatsapp Channel for more updates

ಅನಂತರ ಅವರು ಹಲವಾರು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರಾದರೂ ಪುನಃ ತಮಗೆ ಕೆಲಸ ಕೊಟ್ಟಿದ್ದ ಮೊದಲ ಸಂಸ್ಥೆಯ ಮೇಲಿನ ಮಮಕಾರದಿಂದ ಮತ್ತೆ ಸಂಯುಕ್ತ ಕರ್ನಾಟಕಕ್ಕೆ ಹಿಂದಿರುಗಿದ್ದರು. ಸುದ್ದಿಯ ಮನೆಯಲ್ಲಿ ಸಾಮಾನ್ಯವಾಗಿ ಬರುವ ಒತ್ತಡದ ಸಮಯದಲ್ಲಿಯೂ ಸಮಾಧಾನದಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ, ಪತ್ರಿಕೋದ್ಯಮ ಕ್ಷೇತ್ರದತ್ತ ಒಲವು ಹೊಂದಿದ ವಸಂತ ನಾಡಿಗೇರ ಅವರು ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟಕದಿಂದ ವೃತ್ತಿ ಜೀವನ ಆರಂಭಿಸಿದರು. ವಿಜಯ ಕರ್ನಾಟಕದಲ್ಲಿದ್ದಾಗ ಅವರ ಬಡಿಗೇರ್‌ ಹಾಗೂ ನಾಡಿಗೇರ್‌ ಎನ್ನುವ ಹಾಸ್ಯ ಅಂಕಣ ಜನಪ್ರಿಯವಾಗಿತ್ತು. ಸದ್ಯ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದ್ದವು.

ಗಣ್ಯರ ಸಂತಾಪ :
ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟು ಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾ ರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಸಂತಾಪ ಸೂಚಿಸಿದ್ದಾರೆ.

ವಸಂತ ನಾಡಿಗೇರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮಾಯಿ ಅವರು, ಹಿರಿಯ ಪತ್ರಕರ್ತರು ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದ ವಸಂತ ನಾಡಿಗೇರ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ಆಘಾತವಾಯಿತು. ಸದಾ ಹಸನುಖಿಯಾಗಿದ್ದ ಅವರು ನನಗೆ ಅತ್ಯಂತ ಆತೀಯರು ಸ್ನೇಹಪರ ವ್ಯಕ್ತಿಯಾಗಿದ್ದರು.

ಕನ್ನಡಪ್ರಭ, ವಿಜಯ ಕರ್ನಾಟಕ, ಸಂಯುಕ್ತ ಕರ್ನಾಟಕ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಉನ್ನತ ಹ್ದುೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರು. ಅವರ ಅಗಲಿಕೆಯಿಂದ ಪತ್ರಿಕಾ ರಂಗಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ, ಅವರ ಆತಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಂತಾಪ ಸೂಚಿಸಿದ್ದಾರೆ.

ಪತ್ರಕರ್ತ ವಸಂತ್‌ ನಾಡಿಗೇರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಪ್ರತಿಭಾನ್ವಿತರು, ಕ್ರಿಯಾಶೀಲರಾಗಿದ್ದ ಅವರು ಮಾಧ್ಯಮದ ಮೌಲ್ಯಗಳ ಪ್ರತೀಕವಾಗಿದ್ದರು ಎಂದು ಗುಣಗಾನ ಮಾಡಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರು, ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998 ರಿಂದ 2015 ರವರೆಗೆ ಸುದ್ದಿ ಸಂಪಾದಕರಾಗಿದ್ದ ಅವರು ಸುಮಾರು 3 ದಶಕಗಳಿಂದ ವಿವಿಧ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಅವರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

RELATED ARTICLES

Latest News