ಕಲ್ಪತರು ನಾಡಿಗೂ ಕಾಲಿಟ್ಟ ಧರ್ಮದಂಗಲ್

Social Share

ತುಮಕೂರು,ಫೆ.2- ಗುಬ್ಬಿ ಶ್ರೀ ಚನ್ನಬಸವೇಶ್ವರ ಸ್ವಾಮಿ ಜಾತ್ರೆ ಮಹೋತ್ಸವ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಅನ್ಯಕೋಮಿನವರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಕರಾವಳಿಯಲ್ಲಿದ್ದ ಧರ್ಮದಂಗಲ್ ಕಲ್ಪತರು ನಾಡಿಗೆ ಕಾಲಿಟ್ಟಿದೆ.

ಗುಬ್ಬಿಯಪ್ಪನ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಮುಜರಾಯಿ ವ್ಯಾಪ್ತಿಗೆ ಒಳಪಟ್ಟ ದೇವಸ್ಥಾನದಲ್ಲಿ ಕಾನೂನಿನಂತೆ ನೂರು ಮೀಟರ್ ವ್ಯಾಪ್ತಿಯೊಳಗೆ ಅನ್ಯ ಧರ್ಮೀಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮನವಿ ಮಾಡಿವೆ.

ಫೆ.4ರಂದು ಘೋಷಿತ ಜೆಡಿಎಸ್ ಅಭ್ಯಥಿಗಳ ಸಭೆ

ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್‍ಗೆ ಮನವಿ ಪತ್ರ ಸಲ್ಲಿಸಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಕಾರ್ಯಕರ್ತರು ಮುಜರಾಯಿ ಕಾನೂನಿನಲ್ಲೇ ಆವರಣದಲ್ಲಿ ಅನ್ಯ ಕೋಮಿನವರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ಅಂಶ ಇದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

ಲೋಕಾಯುಕ್ತದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ದೂರಿನ ಸುರಿಮಳೆ

ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ಯಾರಿಗೂ ಅವಕಾಶ ನೀಡಬಾರದು. ಒಂದು ಪೊಲೀಸರು ಕ್ರಮ ಕೈಗೊಳ್ಳದೆ ಇದ್ದರೆ, ಯಾರಾದರೂ ಅನ್ಯ ಕೋಮಿನವರು ವ್ಯಾಪಾರ ಮಾಡುತ್ತಿದ್ದರೆ ತಾವೇ ಹೋಗಿ ಅದನ್ನು ತಡೆಯುವ ಪ್ರಯತ್ನ ಮಾಡುವುದಾಗಿ ಬಜರಂಗದಳ ಜಿಲ್ಲಾ ಮುಖಂಡ ಮಂಜು ಭಾರ್ಗವ್ ತಿಳಿಸಿದ್ದಾರೆ.

VHP, Bajrang Dal, Demands, not, allow, other, religious, channabasaveshwara swamy, fair, tumkur,

Articles You Might Like

Share This Article