Saturday, February 24, 2024
Homeರಾಜ್ಯಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ

ಬೆಳಗಾವಿ,ಜ.4- ಅಯೋಧ್ಯೆಯ ಶ್ರೀ ರಾಮಮೂರ್ತಿ ಪ್ರತಿಷ್ಠಾಪನೆಯಲ್ಲಿ ಭಾಗವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವಿಶ್ವ ಹಿಂದೂ ಪರಿಷತ್‍ನ ಪ್ರಮುಖರು ಆಮಂತ್ರಣ ನೀಡಿದ್ದಾರೆ.

ಬೆಳಗಾವಿಯಲ್ಲಿಂದು ವಿಶ್ವ ಹಿಂದೂ ಪರಿಷತ್‍ನ ಪ್ರಮುಖರಾದ ಪರಮೇಶ್ವರ್ ಹೆಗ್ಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ ಕುಲಕರ್ಣಿ, ಸಚಿವೆ ಲಕ್ಮೀ ಹೆಬ್ಬಾಳ್ಕರ್, ವಿಧಾನಪರಿಷತ್ ಸದಸ್ಯ ಚನ್ನರಾಜ ಅಟ್ಟಿಹೊಳಿ, ಲಕ್ಮೀ ಹೆಬ್ಬಾಳ್ಕರ್‍ರ ಪುತ್ರ ಮೃನಾಲ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.

ಕ್ರಿಮಿನಲ್‍ಗಳನ್ನು ಬೆಂಬಲಿಸುವುದು ಕಾಂಗ್ರೆಸ್ ಸಂಸ್ಕøತಿ: ಆರ್.ಅಶೋಕ್

ಅಯೋಧ್ಯೆಯ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೇ, ಬೇಡವೇ ಎಂಬ ಕುರಿತಂತೆ ಕಾಂಗ್ರೆಸ್‍ನಲ್ಲಿ ಇನ್ನೂ ಚರ್ಚೆಗಳು ನಡೆಯುತ್ತಿವೆ. ಸಂಘ ಪರಿವಾರದ ಮುಖಂಡರು ಆಯ್ದ ಮುಖಂಡರಿಗೆ ಆಹ್ವಾನ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿಲ್ಲ ಎಂಬ ಆಕ್ಷೇಪಗಳು ಇವೆ. ಇದರ ನಡುವೆ ಸಚಿವೆ ಲಕ್ಮೀ ಹೆಬ್ಬಾಳ್ಕರ್ ಅವರಿಗೆ ಆಹ್ವಾನ ನೀಡಿರುವುದು ಕುತೂಹಲ ಕೆರಳಿಸಿದೆ.

RELATED ARTICLES

Latest News