Monday, March 10, 2025
Homeರಾಷ್ಟ್ರೀಯ | Nationalಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

Vice-President Jagdeep Dhankhar admitted to AIIMS, condition stable

ನವದೆಹಲಿ, ಮಾ. 9– ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಧನಕರ್‌ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ದೆಹಲಿಯ ಏಮ್ಸೌ ಆಸ್ಪತ್ರೆಗೆ ದಾಖಲಿಸಲಾ ಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

73 ವರ್ಷದ ಧನಕರ್‌ ಅವರನ್ನು ಮುಂಜಾನೆ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಏಮ್ಸೌನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜೀವ್‌ ನಾರಂಗ್‌ ಅವರ ಅಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಅವರನ್ನು ಕ್ರಿಟಿಕಲ್‌ ಕೇರ್‌ ಯುನಿಟ್‌ (ಸಿಸಿಯು) ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ವೀಕ್ಷಣೆಯಲ್ಲಿದೆ, ವೈದ್ಯರ ಗುಂಪು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು ಏಮ್ಸೌ ಗೆ ಭೇಟಿ ನೀಡಿ ಧನಕರ್‌ ಅವರ ಸ್ಥಿತಿಯ ಬಗ್ಗೆ ವಿಚಾರಿಸಿದರು.

RELATED ARTICLES

Latest News