Sunday, June 30, 2024
Homeರಾಜಕೀಯವಿಧಾನಪರಿಷತ್‌ ಚುನಾವಣೆ : ನಾಳೆ ಬಿಜೆಪಿ - ಜೆಡಿಎಸ್‌‍ ಸಮನ್ವಯ ಸಭೆ

ವಿಧಾನಪರಿಷತ್‌ ಚುನಾವಣೆ : ನಾಳೆ ಬಿಜೆಪಿ – ಜೆಡಿಎಸ್‌‍ ಸಮನ್ವಯ ಸಭೆ

ಬೆಂಗಳೂರು, ಮೇ 25-ವಿಧಾನಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನಾಳೆ ಬಿಜೆಪಿ ಮತ್ತು ಜೆಡಿಎಸ್‌‍ ಸಮನ್ವಯ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಜೆಡಿಎಸ್‌‍ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಸಭೆ ನಡೆಯಲಿದ್ದು, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡ ಅವರ ಗೆಲುವಿಗೆ ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಜೆಡಿಎಸ್‌‍ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಜೆಡಿಎಸ್‌‍ ಯುವಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ಪ್ರಮುಖರು ಭಾಗವಹಿಸಲಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌‍ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದೇವೇಗೌಡ ಅವರ ಗೆಲುವಿಗೆ ಎಲ್ಲರೂ ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕು ಎಂಬ ಸಂದೇಶವನ್ನು ಸಭೆಯಲ್ಲಿ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

RELATED ARTICLES

Latest News